ಸೂಪರ್ ಸ್ಟಾರ್ ರಜನಿಕಾಂತ್'ಗೆ 73ನೇ ಹುಟ್ಟುಹಬ್ಬದ ಸಂಭ್ರಮ: ನಟ ಧನುಷ್ ಸೇರಿ ಅಭಿಮಾನಿಗಳಿಂದ ಶುಭಾಶಯ

ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಇಂದು 73ನೇ ಹುಟ್ಟುಹಬ್ಬದ ಸಂಭ್ರಮ. ಇದರ ಅಂಗವಾಗಿ ನಟ ಧನುಷ್ ಸೇರಿದಂತೆ ದೇಶಾದ್ಯಂತ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚೆನ್ನೈ:  ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಇಂದು 73ನೇ ಹುಟ್ಟುಹಬ್ಬದ ಸಂಭ್ರಮ. ಇದರ ಅಂಗವಾಗಿ ನಟ ಧನುಷ್ ಸೇರಿದಂತೆ ದೇಶಾದ್ಯಂತ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ನಟ ಧನುಷ್ ಸೇರಿದಂತೆ ಹಲವು ಸೆಲೆಬ್ರಿಟಿಗಳು, ಅಭಿಮಾನಿಗಳು, ರಜನಿ ಕಾಂತ್ ಉತ್ತಮ ಆರೋಗ್ಯ ಹೊಂದಿ, ಧೀರ್ಘ ಕಾಲ ಬಾಳಲಿ ಎಂದು ಆಶಿಸುತ್ತಾ ಸಾಮಾಜಿಕ ಮಾಧ್ಯಮಗಳಲ್ಲಿ ಶುಭಾಶಯ ಕೋರುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ನಟ ಧನುಷ್, ಹ್ಯಾಪಿ ಬರ್ತ್ ಡೈ ತಲೈವಾ ಎಂದು ಹೇಳಿದ್ದಾರೆ.

ರಜನಿಕಾಂತ್ 1950 ಡಿಸೆಂಬರ್ 12 ರಂದು ಶಿವಾಜಿ ರಾವ್ ಗಾಯಕ್ವಾಡ್ ಅವರ ಪುತ್ರನಾಗಿ ಬೆಂಗಳೂರಿನಲ್ಲಿ ಜನಿಸಿದರು. 1975ರಲ್ಲಿ ತಮಿಳು ಅಪೂರ್ವ ರಾಗಂಗಳ್ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು, ವಿಭಿನ್ನ ಪಾತ್ರಗಳ ಮೂಲಕ ಜನಪ್ರಿಯರಾಗಿದ್ದು, ದಾದಾ ಸಾಹೇಬ್ ಪಾಲ್ಕೆ, ಪದ್ಮ ವಿಭೂಷಣ, ಪದ್ಮ ಭೂಷಣ, ಎನ್ ಟಿಆರ್ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ- ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com