ಡಿ.17ಕ್ಕೆ ಶ್ರೀಮುರಳಿ ನಟನೆಯ 'ಬಘೀರ' ಚಿತ್ರದ ಟೀಸರ್ ರಿಲೀಸ್

ಸ್ಯಾಂಡಲ್ ವುಡ್ ನಲ್ಲಿ ರೋರಿಂಗ್ ಸ್ಟಾರ್ ಎಂದೇ ಖ್ಯಾತರಾಗಿರುವ ನಟ ಶ್ರೀಮುರಳಿ ನಟನೆಯ ಬಹುನಿರೀಕ್ಷಿತ ಬಘೀರಾ ಚಿತ್ರದ ಟೀಸರ್ ಡಿ.17ಕ್ಕೆ ಬಿಡುಗಡೆಯಾಗಲಿದೆ.
ಚಿತ್ರದ ಸ್ಟಿಲ್.
ಚಿತ್ರದ ಸ್ಟಿಲ್.
Updated on

ಸ್ಯಾಂಡಲ್ ವುಡ್ ನಲ್ಲಿ ರೋರಿಂಗ್ ಸ್ಟಾರ್ ಎಂದೇ ಖ್ಯಾತರಾಗಿರುವ ನಟ ಶ್ರೀಮುರಳಿ ನಟನೆಯ ಬಹುನಿರೀಕ್ಷಿತ ಬಘೀರಾ ಚಿತ್ರದ ಟೀಸರ್ ಡಿ.17ಕ್ಕೆ ಬಿಡುಗಡೆಯಾಗಲಿದೆ.

ಈ ಹಿಂದೆ ಶೂಟಿಂಗ್ ವೇಳೆ ಶ್ರೀಮುರಳಿ ಅವರಿಗೆ ಪೆಟ್ಟಾಗಿತ್ತು. ಅಲ್ಲದೆ, ಮುರಳಿ ಅವರ ಮನೆಯಲ್ಲಿ ಸಂಭವಿಸಿದ್ದ ದುರಂತವೊಂದು ಚಿತ್ರದ ಚಿತ್ರೀಕರಣ ಕೆಲಕಾಲ ಸ್ಥಗಿತಗೊಳ್ಳುವಂತೆ ಮಾಡಿತ್ತು.

ಬಳಿಕ ಆರೋಗ್ಯ ಸುಧಾರಿಸಿಕೊಂಡು ಮತ್ತೆ ಶೂಟಿಂಗ್ ನಲ್ಲಿ ಶ್ರೀಮುರಳಿ ಭಾಗಿಯಾಗಿದ್ದರು. ಇದೀಗ ಬಹುತೇಕ ಚಿತ್ರೀಕರಣ ಮುಗಿದೆ ಎಂದು ಹೇಳಲಾಗುತ್ತಿದೆ.

ಹೊಂಬಾಳೆ ಫಿಲಂಸ್ ನಿರ್ಮಿಸಿರುವ ಈ ಚಿತ್ರದ ಟೀಸರ್ ಶ್ರೀಮುರಳಿ ಅವರ ಹುಟ್ಟುಹಬ್ಬದಂದು (ಡಿಸೆಂಬರ್ 17) ಬಿಡುಗಡೆಯಾಗುತ್ತಿದೆ. ಸವಾಲುಗಳ ಹೊರತಾಗಿಯೂ, ನಟ ಶ್ರೀಮುರಳಿ ಮರಳುವಿಕೆಗಾಗಿ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ಉಗ್ರಂ, ಭರಾಟೆ, ಮದಗಜ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ರೋರಿಂಗ್ ಸ್ಟಾರ್ ಶ್ರೀಮುರಳಿ (Srimurali) ಬಘೀರನಾಗಿ ಮಿಂಚಲು ರೆಡಿಯಾಗಿದ್ದಾರೆ.

ಕೆಜಿಎಫ್’ ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್ ಬರೆದಿರುವ ಕಥೆಗೆ, ಡಾ.ಸೂರಿ ನಿರ್ದೇಶನ ಮಾಡುತ್ತಿದ್ದು, ಬಘೀರನಾಗಿ ಶ್ರೀಮುರಳಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಶ್ರೀಮುರಳಿ ರಗಡ್ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದು, ಡಿಫರೆಂಟ್ ಸ್ಟೋರಿ ಮೂಲಕ ಮೋಡಿ ಮಾಡೋಕೆ ಶ್ರೀಮುರಳಿ ರೆಡಿಯಾಗಿದ್ದಾರೆ.

ಈ ಹಿಂದೆಯೇ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಶ್ರೀಮುರಳಿ ಖಡಕ್ ಲುಕ್ಕಿನಲ್ಲಿ ಕಾಣಿಸಿಕೊಂಡಿದ್ದರು. ಈ ಲುಕ್ ನೋಡಿ ಅಭಿಮಾನಿಗಳು ಕೂಡ ಖುಷಿಪಟ್ಟಿದ್ದರು. ಇದರಂತೆ ಚಿತ್ರದ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಾಗಿಯೇ ಇದೆ. ಹಾಗಾಗಿ ಟೀಸರ್ ಬಗ್ಗೆಯೂ ಕುತೂಹಲ ಹೆಚ್ಚಾಗಿದೆ.

ಹೊಂಬಾಳೆ ಫಿಲ್ಮ್ಸ್‌ನ ಸಲಾರ್ ಚಿತ್ರ ಡಿಸೆಂಬರ್ 22 ರಂದು ಹಾಗೂ ಮಾರ್ಚ್ 28 ರಂದು ಯುವರಾಜ್‌ಕುಮಾರ್ ಅಭಿನಯದ ಯುವ ಚಿತ್ರ ಬಿಡುಗಡೆಯಾಗುತ್ತಿದೆ. ಇದರ ನಡುವಲ್ಲೇ ಬಘೀರಾ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದ್ದು, ಶೀಘ್ರದಲ್ಲೇ ಚಿತ್ರತಂಡ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ.

ಇನ್ನು ಒಂದು ದಶಕದ ನಂತರ ನಿರ್ದೇಶಕ ಸೂರಿ ಅವರು ಬಘೀರಾ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಮ್ ಬ್ಯಾಕ್ ಆಗುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಶೇ.90ರಷ್ಟು ಪೂರ್ಣಗೊಂಡಿದ್ದು, ಅಂತಿಮ ಹಂತದ ಚಿತ್ರೀಕರಣವನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತಿದೆ.

ಬಘೀರ ಚಿತ್ರಕ್ಕೆ ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಅವರು ಕತೆ ಬರೆದಿದ್ದರೆ, ಡಾ. ಸೂರಿ ನಿರ್ದೇಶನ ಚಿತ್ರಕ್ಕಿದೆ. ವಿಜಯ ಕಿರಗಂದೂರು ಹೊಂಬಾಳೆ ಫಿಲಂಸ್ ಮೂಲಕ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಪ್ತ ಸಾಗರದಾಚೆ ಎಲ್ಲೋ ಚಿತ್ರದಿಂದ ಖ್ಯಾತಿ ಪಡೆದ ರುಕ್ಮಿಣಿ ವಸಂತ್ ಚಿತ್ರದ ನಾಯಕಿಯಾಗಿದ್ದು ಲೋಕನಾಥ್ ಸಂಗೀತ, ಎಜೆ ಶೆಟ್ಟಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com