ಶಾರುಖ್ ಖಾನ್ ನಟನೆಯ ಡಂಕಿಗೆ ಸಲಾರ್ ಸವಾಲು: ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ 500 ಕೋಟಿ ರೂ. ಕಲೆಕ್ಷನ್

ಪ್ರಭಾಸ್ ಅಭಿನಯದ 'ಸಲಾರ್: ಭಾಗ 1 - ಕದನ ವಿರಾಮ' ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದ್ದು, 500 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರತಂಡ ಗುರುವಾರ ತಿಳಿಸಿದೆ. ಚಿತ್ರತಂಡ ಇತ್ತೀಚಿನ ಬಾಕ್ಸ್ ಆಫೀಸ್ ಅಂಕಿಅಂಶಗಳನ್ನು "ಸಲಾರ್" ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಸಲಾರ್ ಚಿತ್ರದ ಸ್ಟಿಲ್
ಸಲಾರ್ ಚಿತ್ರದ ಸ್ಟಿಲ್

ಮುಂಬೈ: ಪ್ರಭಾಸ್ ಅಭಿನಯದ 'ಸಲಾರ್: ಭಾಗ 1- ಕದನ ವಿರಾಮ' ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದ್ದು, 500 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರತಂಡ ಗುರುವಾರ ತಿಳಿಸಿದೆ.

ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಚಿತ್ರದಲ್ಲಿ ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಕೂಡ ನಟಿಸಿದ್ದಾರೆ.

ಚಿತ್ರವು ಡಿಸೆಂಬರ್ 22 ರಂದು ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.

ಚಿತ್ರತಂಡ ಇತ್ತೀಚಿನ ಬಾಕ್ಸ್ ಆಫೀಸ್ ಅಂಕಿಅಂಶಗಳನ್ನು "ಸಲಾರ್" ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
'ಸಲಾರ್ ಚಿತ್ರವು ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 500 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ' ಎಂದು ಹೇಳಿದೆ.

ಚಿತ್ರದಲ್ಲಿ ಶೃತಿ ಹಾಸನ್, ಈಶ್ವರಿ ರಾವ್, ಜಗಪತಿ ಬಾಬು ಮತ್ತು ಸರ್ಯಾನ್ ರೆಡ್ಡಿ ಕೂಡ ನಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com