ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚುವುದಿಲ್ಲ: ಪಠಾಣ್ ಸಿನಿಮಾ ವಿರೋಧಿಗಳ ಬಗ್ಗೆ ಪ್ರಕಾಶ್ ರಾಜ್ ಟೀಕೆ

ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಪ್ರಕಾಶ್ ರಾಜ್​, ‘ಅವರು ಪಠಾಣ್ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಅಂದುಕೊಂಡಿದ್ದರು. ಆದರೆ, ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.
ಪ್ರಕಾಶ್ ರಾಜ್
ಪ್ರಕಾಶ್ ರಾಜ್

ಪಠಾಣ್ ಸಿನಿಮಾ ರಿಲೀಸ್​ಗೂ ಮೊದಲು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಒಂದು ವರ್ಗದ ಜನರು ಆಗ್ರಹಿಸಿದ್ದರು. ಆದರೆ, ಇದು ಕೆಲಸ ಮಾಡಿಲ್ಲ. ಈ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ವಿಚಾರ ಇಟ್ಟುಕೊಂಡು ಕೆಲವರು ಬೈಕಾಟ್ ಗ್ಯಾಂಗ್​ನ ಟೀಕೆ ಮಾಡುತ್ತಿದ್ದಾರೆ ಪ್ರಕಾಶ್ ರಾಜ್ ಕೂಡ ಈ ಬಗ್ಗೆ ಮಾತನಾಡಿದ್ದಾರೆ.

ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಪ್ರಕಾಶ್ ರಾಜ್​, ‘ಅವರು ಪಠಾಣ್ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಅಂದುಕೊಂಡಿದ್ದರು. ಆದರೆ, ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮೂರ್ಖರು, ಮತಾಂಧರು ಪಠಾಣ್​ನ ಬ್ಯಾನ್ ಮಾಡಲು ಬಯಿಸಿದ್ದರು. ಅವರಿಗೆ ಮೋದಿ ಸಿನಿಮಾಗೆ 30 ಕೋಟಿ ರೂಪಾಯಿ ಕಲೆಕ್ಷನ್ ಮಾಡಿಸಲು ಸಾಧ್ಯವಾಗಿಲ್ಲ. ಅವರು ಬೊಗಳುತ್ತಾರೆ, ಕಚ್ಚುವುದಿಲ್ಲ’ ಎಂದಿದ್ದಾರೆ.

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನೂ ಪ್ರಕಾಶ್ ರಾಜ್ ಟೀಕೆ ಮಾಡಿದ್ದಾರೆ. ‘ಕಾಶ್ಮೀರ್ ಫೈಲ್ಸ್​ ನಾನ್ಸೆನ್ಸ್ ಸಿನಿಮಾ. ಅದನ್ನು ನಿರ್ಮಾಣ ಮಾಡಿದ್ದು ಯಾರು ಅನ್ನೋದು ನಿಮಗೆ ಗೊತ್ತಿದೆ. ಅಂತಾರಾಷ್ಟ್ರಿಯ ಜ್ಯೂರಿಗಳು ಚಿತ್ರವನ್ನು ತೆಗಳಿದರು. ಈ ಚಿತ್ರದ ನಿರ್ದೇಶಕ ನಮ್ಮ ಚಿತ್ರಕ್ಕೆ ಏಕೆ ಆಸ್ಕರ್ ಸಿಗುತ್ತಿಲ್ಲ ಎಂದು ಕೇಳುತ್ತಿದ್ದಾರೆ. ಇಲ್ಲಿ ನೀವು ಪ್ರೊಪೊಗಾಂಡ ಚಿತ್ರಗಳನ್ನು ಮಾಡಬಹುದು. ಈ ರೀತಿಯ ಸಿನಿಮಾಗಳನ್ನು ನಿರ್ಮಾಣ ಮಾಡಲು ಅವರು 2000 ಸಾವಿರ ಕೋಟಿ ಹೂಡಿಕೆ ಮಾಡಿದ್ದಾರೆ. ಆದರೆ, ಎಲ್ಲಾ ಬಾರಿಯೂ ಜನ್ನರು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ ಅವರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com