ರಿಷಬ್-ವಿಜಯ್ ಕಿರಗಂದೂರು
ಸಿನಿಮಾ ಸುದ್ದಿ
ವರಾಹರೂಪಂ ವಿವಾದ: ಕೇರಳ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿ!
ಕೆಜಿಎಎಫ್ 2 ಬಳಿಕ ಕನ್ನಡ ಚಿತ್ರರಂಗದಲ್ಲಿ ದಾಖಲೆಯ ಕಲೆಕ್ಷನ್ ಮಾಡಿದ ಕಾಂತಾರ ಚಿತ್ರದ ವರಾಹರೂಪಂ ಹಾಡಿನ ಮೇಲೆ ಕೇರಳದ ತೈಕುಡಮ್ ಬ್ರಿಡ್ಜ್ ಆಲ್ಬಂ ಬ್ಯಾಂಡ್ ಕೃತಿಚೌರ್ಯ ಆರೋಪ ಮಾಡಿತ್ತು.
ಕೋಯಿಕೋಡ್(ಕೇರಳ): ಕೆಜಿಎಎಫ್ 2 ಬಳಿಕ ಕನ್ನಡ ಚಿತ್ರರಂಗದಲ್ಲಿ ದಾಖಲೆಯ ಕಲೆಕ್ಷನ್ ಮಾಡಿದ ಕಾಂತಾರ ಚಿತ್ರದ ವರಾಹರೂಪಂ ಹಾಡಿನ ಮೇಲೆ ಕೇರಳದ ತೈಕುಡಮ್ ಬ್ರಿಡ್ಜ್ ಆಲ್ಬಂ ಬ್ಯಾಂಡ್ ಕೃತಿಚೌರ್ಯ ಆರೋಪ ಮಾಡಿದ್ದು ಈ ಸಂಬಂಧ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ ಕಿರಗಂದೂರು ಕೇರಳ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೇರಳ ಪೊಲೀಸರು ನೋಟಿಸ್ ನೀಡಿದ್ದು ಈ ಹಿನ್ನೆಲೆಯಲ್ಲಿ ರಿಷಬ್ ಮತ್ತು ವಿಜಯ್ ಅವರು ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತನಿಖಾಧಿಕಾರಿ ಡಿಸಿಪಿ ಕೆಇ ಬೈಜು ತಿಳಿಸಿದ್ದಾರೆ.
2015ರಲ್ಲಿ ಕೇರಳದಲ್ಲಿ ಬಿಡುಗಡೆಯಾಗಿದ್ದ ತೈಕುಡಮ್ ಬ್ರಿಡ್ಜ್ ಆಲ್ಬಂ ಬ್ಯಾಂಡ್ ನ ನವರಸದ ನಕಲು ಎಂದು ಆರೋಪಿಸಿತ್ತು. ಅಲ್ಲದೆ ಕೃತಿಚೌರ್ಯ ಆರೋಪದಡಿ ನಿರ್ದೇಶಕ ಮತ್ತು ನಿರ್ಮಾಪಕರನ್ನು ಬಂಧಿಸಬೇಕು ಎಂದು ಪ್ರಕರಣ ದಾಖಲಿಸಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ