ಗಾಯಕಿ ಮಂಗ್ಲಿ ಈಗ 'ಪಾದರಾಯ' ನಾಯಕಿ: ಸಿನಿಮಾಗಾಗಿ ನಾಗಶೇಖರ್ 42 ದಿನಗಳ ವ್ರತ!

ಗಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಮಂಗ್ಲಿ, ಮೊದಲ ಬಾರಿಗೆ ನಾಯಕಿಯಾಗಿ ಪ್ರವೇಶ ಮಾಡುತ್ತಿದ್ದಾರೆ. ಪತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ನಿರ್ದೇಶನದಲ್ಲಿ ಮೂಡಿ ಬರಲಿರುವ ಪಾದರಾಯ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ನಾಗಶೇಖರ್ ಮಂಗ್ಲಿ ಮತ್ತು ಚಕ್ರವರ್ತಿ ಚಂದ್ರಚೂಡ್
ನಾಗಶೇಖರ್ ಮಂಗ್ಲಿ ಮತ್ತು ಚಕ್ರವರ್ತಿ ಚಂದ್ರಚೂಡ್

ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಸೂಪರ್ ಹಿಟ್ ಹಾಡುಗಳನ್ನು  ಹಾಡಿರುವ ಮಂಗ್ಲಿ, ಇದೀಗ ಪೂರ್ಣ ಪ್ರಮಾಣದ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ.

ಗಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಮಂಗ್ಲಿ, ಮೊದಲ ಬಾರಿಗೆ ನಾಯಕಿಯಾಗಿ ಪ್ರವೇಶ ಮಾಡುತ್ತಿದ್ದಾರೆ. ಪತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ನಿರ್ದೇಶನದಲ್ಲಿ ಮೂಡಿ ಬರಲಿರುವ ಪಾದರಾಯ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಸದ್ಯ ವೇದ ಸಿನಿಮಾದ ‘ಗಿಲ್ಲಕ್ಕೋ’ ಹಾಡಿನ ಮೂಲಕ ಮನೆಮಾತಾಗಿರುವ ಮಂಗ್ಲಿ, ತ್ರಿಬಲ್ ರೈಡಿಂಗ್,  ದಿಲ್ ಪಸಂದ್, ರಾಬರ್ಟ್ ಸೇರಿದಂತೆ ಹಲವಾರು ಕನ್ನಡ ಸಿನಿಮಾಗಳ ಹಾಡಿಗೆ ದನಿಯಾಗಿದ್ದಾರೆ.

ಇದೊಂದು ನೈಜ ಘಟನೆಯನ್ನು ಆಧರಿಸಿದ ಸಿನಿಮಾವಾಗಿದ್ದು, 2013-14ರಲ್ಲಿ ನಡೆದ ಘಟನೆಯನ್ನು ಚಿತ್ರವಾಗಿಸುತ್ತಿದ್ದಾರೆ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ. ಈ ಘಟನೆಯು ಆರು ರಾಜ್ಯಗಳಿಗೆ ಸಂಬಂಧಿಸಿದ್ದಾಗಿದ್ದು, ಅದನ್ನು ಹೊಸ ರೀತಿಯಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ. ಚಿತ್ರಕಥೆ, ಸಂಭಾಷಣೆ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿರುವ ಅವರು, ಈ ಚಿತ್ರಕ್ಕೆ ಪಾದರಾಯ ಎಂದು ಹೆಸರಿಡುವುದಕ್ಕೂ ಕಾರಣವಿದೆಯಂತೆ. ಅದನ್ನು ಸಿನಿಮಾದಲ್ಲಿಯೇ ನೋಡಿ ಎನ್ನುತ್ತಾರೆ.

ಹನುಮ ಜಯಂತಿಯಂದು ಪಾದರಾಯ ಸಿನಿಮಾ ಆರಂಭವಾಯಿತು, ಪಾದರಾಯ ಎಂದರೇ ಹನುಮಂತ ಎಂದರ್ಥ. ಅಂಜನಾದ್ರಿ ಸುತ್ತಮುತ್ತ ನಡೆಯುವ ಕಥೆ ಚಿತ್ರಲ್ಲಿದೆ. ಈ ಘಟನೆ ಆರು ರಾಜ್ಯಕ್ಕೆ ಸಂಬಂಧಿಸಿದ್ದು, ಯೂನಿವರ್ಸಲ್ ಸಬ್ಜೆಕ್ಟ್ ಆಗಿರುವುದರಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತಯಾರಾಗುತ್ತಿದೆ. ಶಾಲಿನಿ ಆರ್ಟ್ಸ್ ಬ್ಯಾನರ್ ನಡಿ ಜಾಕ್ ಮಂಜು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಹನುಮ ಮಾಲೆ ಧರಿಸಿದ್ದಾರೆ. ಜನವರಿ 23ರಂದು ಸಿನಿಮಾ ಮೂಹೂರ್ತ ನಡೆಯುವ ಸಾಧ್ಯತೆಯಿದೆ.

ಈಗಾಗಲೇ ಪಾತ್ರಕ್ಕಾಗಿ ನಾಗಶೇಖರ್ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ತಯಾರಿಗಾಗಿಯೇ ಅವರು ಹಲವು ದಿನಗಳಿಂದ ಅಂಜನಾದ್ರಿ ಬೆಟ್ಟದಲ್ಲಿ ಬೀಡುಬಿಟ್ಟಿದ್ದಾರಂತೆ.  42 ದಿನಗಳ ಕಟ್ಟುನಿಟ್ಟಿನ ವ್ರತ ಆಚರಣೆ ಮಾಡಲು ಮುಂದಾಗಿದ್ದಾರೆ. 42 ದಿನಗಳ ಕಾಲ ಅವರು ಅಂಜನಾದ್ರಿ ಬೆಟ್ಟದಲ್ಲಿಯೇ ವ್ರತ ಆಚರಿಸಲಿದ್ದಾರಂತೆ. ಈ ಬೆಟ್ಟದಲ್ಲಿ ನಡೆಯುವ ಪೂಜ ಪುನಸ್ಕಾರಗಳಲ್ಲೂ ಅವರು ಭಾಗಿಯಾಗಿದ್ದಾರೆ. ಅಲ್ಲದೇ, ಹನುಮನ ಮಾಲೆಯನ್ನೂ ಧರಿಸಿ, ಅಲ್ಲಿನ ಆಚಾರ ವಿಚಾರಗಳನ್ನು ತಿಳಿದುಕೊಳ್ಳುತ್ತಿದ್ದಾರಂತೆ.

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ತಮಿಳು ಚಿತ್ರರಂಗದ ಹೆಸರಾಂತ ಸಂಕಲನಕಾರ ಆಂಟೋನಿ ಚಿತ್ರದ ಸಂಕಲನ ಜವಾಬ್ದಾರಿ ಹೊತ್ತಿದ್ದಾರೆ. ಸತ್ಯ ಹೆಗಡೆ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಇನ್ನುಳಿದ ತಾರಾಗಣದಲ್ಲಿ ಯಾರೆಲ್ಲ ಇರಲಿದ್ದಾರೆ, ಶೂಟಿಂಗ್‌ ಕುರಿತ ಮಾಹಿತಿ ಇನ್ನು ಕೆಲ ದಿನಗಳ ಬಳಿಕ ಗೊತ್ತಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com