ಕೋಮಲ್ ಕುಮಾರ್ 'ಕಾಲಾಯ ನಮಃ' ಚಿತ್ರದಲ್ಲಿ ನಟ ಪ್ರಕಾಶ್ ರೈ

ಪವನ್ ಒಡೆಯರ್ ಅವರ ಗೋವಿಂದಾಯ ನಮಃ ಚಿತ್ರದ ಮೂಲಕ ನಾಯಕನಾಗಿ ಹೊರಹೊಮ್ಮಿದ ಹಾಸ್ಯನಟ ನಟ ಕೋಮಲ್ ಕುಮಾರ್ ಐದು ವರ್ಷಗಳ ನಂತರ ಕಾಲಾಯ ನಮಃ ಚಿತ್ರದ ನಾಯಕನಾಗಿ ನಟಿಸಲು ಮರಳುತ್ತಿದ್ದಾರೆ.
ಕೋಮಲ್ ಕುಮಾರ್ ಮತ್ತು ಪ್ರಕಾಶ್ ರಾಜ್
ಕೋಮಲ್ ಕುಮಾರ್ ಮತ್ತು ಪ್ರಕಾಶ್ ರಾಜ್
Updated on: 

ಪವನ್ ಒಡೆಯರ್ ಅವರ ಗೋವಿಂದಾಯ ನಮಃ ಚಿತ್ರದ ಮೂಲಕ ನಾಯಕನಾಗಿ ಹೊರಹೊಮ್ಮಿದ ಹಾಸ್ಯನಟ ನಟ ಕೋಮಲ್ ಕುಮಾರ್ ಐದು ವರ್ಷಗಳ ನಂತರ ಕಾಲಾಯ ನಮಃ ಚಿತ್ರದ ನಾಯಕನಾಗಿ ನಟಿಸಲು ಮರಳುತ್ತಿದ್ದಾರೆ.

ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇದೀಗ ಚಿತ್ರತಂಡದಿಂದ ಹೊಸ ಅಪ್ ಡೇಟ್ ಹೊರ ಬಿದ್ದಿದ್ದು, ಬಹುಭಾಷಾ ನಟ ಪ್ರಕಾಶ್‌ ರೈ ಕೋಮಲ್‌ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಖುಷಿ ವಿಚಾರವನ್ನು ಹಂಚಿಕೊಂಡಿದೆ.

ತಮ್ಮ ನಟನೆಯ ಮೂಲಕ ಭಾರತದಾದ್ಯಂತ ಹೆಸರು ಮಾಡಿರುವ ಬಹುಭಾಷಾ ನಟ ಪ್ರಕಾಶ್ ರೈ " ಕಾಲಾಯಾ ನಮಃ" ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಪ್ರಕಾಶ್ ರೈ ಅವರ ಅಭಿನಯದ ಸನ್ನಿವೇಶಗಳ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ಅನುಸೂಯ ಕೋಮಲ್ ಕುಮಾರ್ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಮತಿವಣನ್ ಆಕ್ಷನ್‌ ಕಟ್‌ ಹೇಳಿದ್ದಾರೆ. ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ. ತಿಲಕ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಕೋಮಲ್ ಕುಮಾರ್,  ಆಸಿಯಾ ಫಿರ್ದೋಸ್, ಪ್ರಕಾಶ್ ರೈ, ಸುಚೇಂದ್ರ ಪ್ರಸಾದ್, ತಿಲಕ್, ಯತಿರಾಜ್ ಜಗ್ಗೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಹಾಸ್ಯ ಕಲಾವಿದನಾಗಿ ಜನಪ್ರಿಯರಾಗಿರುವ ನಟ ಕೋಮಲ್ ಕುಮಾರ್, ನಾಯಕನಾಗೂ ಸೈ ಎನಿಸಿಕೊಂಡವರು. ಕಳೆದ ಕೆಲವು ವರ್ಷಗಳಿಂದ ಕೋಮಲ್ ಕುಮಾರ್  ಚಿತ್ರರಂಗದಿಂದ ದೂರವಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com