ಗೆಳೆಯ ಉದ್ಯಮಿ ವಿಶಾಲ್ ಶಿವಪ್ಪ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶುಭ್ರ ಅಯ್ಯಪ್ಪ

ಸ್ಯಾಂಡಲ್ ವುಡ್ ನಲ್ಲೀಗ ಗಟ್ಟಿಮೇಳ ಸಂಭ್ರಮ. ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್‌ಗೆ 'ವಜ್ರಕಾಯ' ದಲ್ಲಿ ನಾಯಕಿಯಾಗುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕೊಡಗು ಮೂಲದ ನಟಿ ಶುಭ್ರ ಅಯ್ಯಪ್ಪ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ಉದ್ಯಮಿ ವಿಶಾಲ್ ಶಿವಪ್ಪ ಜೊತೆ ಸಪ್ತಪದಿ ತುಳಿದಿದ್ದಾರೆ.
ಮದುವೆ ಕಾರ್ಯಕ್ರಮದಲ್ಲಿ ನಟಿ ಶುಭ್ರ ಅಯ್ಯಪ್ಪ ಮತ್ತು ವಿಶಾಲ್ ಶಿವಪ್ಪ
ಮದುವೆ ಕಾರ್ಯಕ್ರಮದಲ್ಲಿ ನಟಿ ಶುಭ್ರ ಅಯ್ಯಪ್ಪ ಮತ್ತು ವಿಶಾಲ್ ಶಿವಪ್ಪ
Updated on

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲೀಗ ಗಟ್ಟಿಮೇಳ ಸಂಭ್ರಮ. ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್‌ಗೆ 'ವಜ್ರಕಾಯ' ದಲ್ಲಿ ನಾಯಕಿಯಾಗುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕೊಡಗು ಮೂಲದ ನಟಿ ಶುಭ್ರ ಅಯ್ಯಪ್ಪ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ಉದ್ಯಮಿ ವಿಶಾಲ್ ಶಿವಪ್ಪ ಜೊತೆ ಸಪ್ತಪದಿ ತುಳಿದಿದ್ದಾರೆ.

ಕಳೆದ ತಿಂಗಳು ಅದಿತಿ ಪ್ರಭುದೇವ ಹಸೆಮಣೆ ಏರಿದ್ದ ಬೆನ್ನಲ್ಲೇ ಇದೀಗ ನಟಿ ಶುಭ್ರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಾಕಷ್ಟು ವರ್ಷಗಳ ಡೇಟಿಂಗ್ ನಂತರ ಗುರುಹಿರಿಯರ ಒಪ್ಪಿಗೆಯ ಮೇರೆಗೆ ಶುಭ್ರ ಮತ್ತು ವಿಶಾಲ್ ಮದುವೆಯಾಗಿದ್ದಾರೆ.

ಉದ್ಯಮಿ ವಿಶಾಲ್ ಮತ್ತು ಶುಭ್ರ ಮದುವೆ ನಿನ್ನೆ ಕೂರ್ಗ್‌ನ `ದೊಡ್ಮನೆ’ (Doddamane) ಎಂಬ 150 ವರ್ಷದ ಹಳೆಯ ಮನೆಯಲ್ಲಿ ಮದುವೆಯಾಗಿದ್ದಾರೆ. ಈ ಮದುವೆಗೆ ಕುಟುಂಬಸ್ಥರು, ಆಪ್ತರು ಅಷ್ಟೇ ಭಾಗವಹಿಸಿದ್ದರು. ನಾಳೆ ಮತ್ತು 21ರಂದು ಸಿನಿಮಾ ರಂಗದ ಸ್ನೇಹಿತರಿಗೆ ಆಪ್ತರಿಗೆ ಮೈಸೂರಿನಲ್ಲಿ ಆರತಕ್ಷತೆ ಇರಲಿದೆ.

ಶುಭ್ರ ಮದುವೆಯಲ್ಲಿ ಕೊಡಗು ಮೂಲದ ನಟಿ ನಿಧಿ ಸುಬ್ಬಯ್ಯ, `ಮುಂಗಾರು ಮಳೆ 2′ ಖ್ಯಾತಿಯ ನೇಹಾ ಶೆಟ್ಟಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com