ಬೆಂಗಳೂರು: 'ಶಭಾಷ್ ಬಡ್ಡಿ ಮಗನೇ' ಸಿನಿಮಾ ನಿರ್ಮಾಪಕ ಪ್ರಕಾಶ್ ಬಂಧನ

ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ನಿರ್ಮಾಪಕ ಪ್ರಕಾಶ್ ನನ್ನು ಬೆಂಗಳೂರಿನ ಅಡುಗೋಡಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ನಿರ್ಮಾಪಕ ಪ್ರಕಾಶ್ ನನ್ನು ಬೆಂಗಳೂರಿನ ಅಡುಗೋಡಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ನಟ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ "ಶಭಾಷ್ ಬಡ್ಡಿ ಮಗನೇ" ಸಿನೆಮಾದ ನಿರ್ಮಾಪಕ ಪ್ರಕಾಶ್ ನನ್ನು ಪೊಲೀಸರು ಬಂಧಿಸಿರುವುದಾಗಿ ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಮೂಲದ ಚರಣ್ ಎಂಬವರಿಂದ ಕೆಎಂಎಫ್ ನಲ್ಲಿ 20 ಲಕ್ಷಕ್ಕೆ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಮುಂಗಡವಾಗಿ 10 ಲಕ್ಷ ರೂ. ಪಡೆದಿದ್ದರು ಎನ್ನಲಾಗಿದೆ.

ಕಳೆದ ಡಿಸೆಂಬರ್ ನಲ್ಲಿ ಕೆಎಂಎಫ್ ನಲ್ಲಿ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆ ನಡೆದಿತ್ತು. ಕೆಎಂಎಫ್ ನಿರ್ದೇಶಕರ ಸರ್ಕಾರಿ ಲಾಂಛನ ನಕಲು ಮಾಡಿ ಈತ ಹುದ್ದೆಯ ಆದೇಶದ ಪ್ರತಿ ನೀಡುತ್ತಿದ್ದನು. ಸದ್ಯ ಚರಣ್ ನೀಡಿದ ದೂರಿನ ಮೇರೆಗೆ ಪ್ರಕಾಶ್ ನನ್ನು ಪೊಲೀಸರು ಬಂಧಿಸಿ, ಮುಂದಿನ ಕ್ರಮಕೈಗೊಂಡಿದ್ದಾರೆ.

ಚಿಕ್ಕಬಳ್ಳಾಪುರ ಮೂಲದ ಚರಣ್ ರಾಜ್ ಎಂಬಾತನಿಂದ 10 ಲಕ್ಷ ರೂ. ಪಡೆದಿದ್ದ ಇವರು, ತಾಂತ್ರಿಕ ಅಧಿಕಾರಿ ಹುದ್ದೆಯ ನೇಮಕಾತಿ ಆದೇಶದ ನಕಲಿ ಪ್ರತಿ ನೀಡಿ ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ. ನಕಲಿ ಪ್ರತಿ ಗಮನಿಸಿದ್ದ ಕೆಎಂಎಫ್ ಅಧಿಕಾರಿಗಳು ಆಡುಗೋಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಆಡುಗೋಡಿ ಪೊಲೀಸರು ತಿಳಿಸಿದ್ದಾರೆ.

ಸಿನಿಮಾಗಳಲ್ಲಿ ಪ್ರೊಡಕ್ಷನ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ ಪ್ರಕಾಶ್, ಇತ್ತೀಚೆಗೆ ನಟ ಪ್ರಮೋದ್ ಶೆಟ್ಟಿ ಅಭಿನಯದಲ್ಲಿ 'ಶಭಾಷ್ ಬಡ್ಡಿ ಮಗನೇ' ಹೆಸರಿನ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಅಲ್ಲದೇ ಕಳೆದ ಅಕ್ಟೋಬರ್​ನಲ್ಲಿ ಸಿನಿಮಾ ಸೆಟ್ಟೇರಿದ್ದು, ತಮ್ಮ ಪುತ್ರನ ಹಿಸರಿನಲ್ಲೇ ಚಿತ್ರ ನಿರ್ಮಾಣವಾಗುತ್ತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com