ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜ್‌ಕುಮಾರ್, ತಾರಾಗೆ ಶ್ರೀ ರಾಘವೇಂದ್ರ ಚಿತ್ರವಾಣಿ ವಿಶೇಷ ಪ್ರಶಸ್ತಿ

ಶ್ರೀ ರಾಘವೇಂದ್ರ ಚಿತ್ರವಾಣಿಯವರ 47 ನೇ ವಾರ್ಷಿಕೋತ್ಸವದ ಜೊತೆಗೆ 21 ಮತ್ತು 22 ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಿತು. ಈ ಅದ್ಧೂರಿ ಸಮಾರಂಭದಲ್ಲಿ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ವಿವಿಧ ಚಿತ್ರರಂಗದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ
ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

ಬೆಂಗಳೂರು: ಕನ್ನಡ ಚಲನಚಿತ್ರ ಪ್ರಚಾರ ಸಂಸ್ಥೆ ಶ್ರೀರಾಘವೇಂದ್ರ ಚಿತ್ರವಾಣಿಯ 25ನೇ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿವೆ. 2021 ಮತ್ತು 2022ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.  47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಕೊಂಡಿಯಂತೆ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ.  ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವಿವಿಧ ಗಣ್ಯರು, ಕಳೆದ 47 ವರ್ಷಗಳಿಂದ ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಸುಧೀಂದ್ರ ವೆಂಕಟೇಶ್ ಅವರ ಶ್ರಮವನ್ನು ಶ್ಲಾಘಿಸಿದರು.

ಶ್ರೀ ರಾಘವೇಂದ್ರ ಚಿತ್ರವಾಣಿಯವರ 47 ನೇ ವಾರ್ಷಿಕೋತ್ಸವದ ಜೊತೆಗೆ 21 ಮತ್ತು 22 ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಿತು. ಈ ಅದ್ಧೂರಿ ಸಮಾರಂಭದಲ್ಲಿ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ವಿವಿಧ ಚಿತ್ರರಂಗದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸುಧೀಂದ್ರ ವೆಂಕಟೇಶ್ ನೇತೃತ್ವದ ಶ್ರೀ ರಾಘವೇಂದ್ರ ಚಿತ್ರವಾಣಿ ವಿಶೇಷ ಪ್ರಶಸ್ತಿಗಳನ್ನು ಹೊಂಬಾಳೆ ಫಿಲಂಸ್‌ನ ನಿರ್ಮಾಪಕ ವಿಜಯ್ ಕಿರಗಂದೂರು, ಪಿಆರ್‌ಕೆ ಪ್ರೊಡಕ್ಷನ್ಸ್‌ನ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮತ್ತು ನಟಿ ತಾರಾ ಅವರಿಗೆ ಪ್ರದಾನ ಮಾಡಲಾಯಿತು. 2021 ಮತ್ತು 2022 ಎರಡೂ ವರ್ಷಗಳಿಗೆ ಒಟ್ಟು 16 ಪ್ರಶಸ್ತಿಗಳನ್ನು ನೀಡಲಾಗಿದೆ.

ನಿರ್ಮಾಪಕರಾದ ವಿಜಯ ಕಿರಗಂದೂರು, ಅಶ್ವಿನಿ ಪುನೀತ್‌ ರಾಜಕುಮಾರ್‌, ನಟಿ ತಾರಾ ಅನುರಾಧಾ ಅವರಿಗೆ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ವಿಶೇಷ ಪ್ರಶಸ್ತಿ ಸಂದಿದೆ.  ವಿಜಯ ಕಿರಗಂದೂರು ಪರವಾಗಿ ಅವರ ಪತ್ನಿ ಶೈಲಜಾ ಪ್ರಶಸ್ತಿ ಸ್ವೀಕರಿಸಿದರು. ಬೆಂಗಳೂರಿನ ಕಲಾವಿದರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರರಂಗದ ಗಣ್ಯರು ಪಾಲ್ಗೊಂಡರು.

ಚಲನಚಿತ್ರ ವಾಣಿಜ್ಯ ಸಂಘದ ಅಧ್ಯಕ್ಷ ಭಾ ಮ ಹರೀಶ್‌, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕ್ಕಾರ್‌ ಪ್ರಶಸ್ತಿ ಪ್ರದಾನ ಮಾಡಿದರು.  ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ಪಿ ಧನರಾಜ್‌, ಈಶ್ವರ ದೈತೋಟ, ಕುಮಾರ್‌ ಗೋವಿಂದ್‌, ಸದಾಶಿವ ಶೆಣೈ, ರಾಜೇಶ್‌ ಕೃಷ್ಣನ್‌, ಸಾಯಿಪ್ರಕಾಶ್‌, ತುಳಸಿ, ನೋಬಿನ್‌ ಪಾಲ್‌, ಮಧುಚಂದ್ರ, ಶ್ರೀನಿ, ಪ್ರಮೋದ್‌ ಮರವಂತೆ, ಶ್ರೀನಿವಾಸ್‌ ಮೂರ್ತಿ ಮೊದಲಾದವರು ಪ್ರಶಸ್ತಿ ಸ್ವೀಕರಿಸಿದರು.

‘ಕೆಜಿಎಫ್ 2’ ಮತ್ತು ‘ಕಾಂತಾರ’ ಎರಡೂ ಚಿತ್ರಗಳನ್ನು ನಿರ್ಮಿಸಿ, ಕನ್ನಡ ಚಿತ್ರರಂಗಕ್ಕೆ ಕೀರ್ತಿ ತಂದ ನಿರ್ಮಾಣ ಸಂಸ್ಥೆ ಎಂಬ ಕಾರಣಕ್ಕೆ ಹೊಂಬಾಳೆ ಫಿಲ್ಮ್ಸ್‌ಗೆ ಈ ಪ್ರಶಸ್ತಿ ಸಂದಿದೆ. ಕಳೆದ ವರ್ಷ ಬಿಡುಗಡೆಯಾದ ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಗಂಧದ ಗುಡಿ’ ಡಾಕ್ಯುಚಿತ್ರದ ನಿರ್ಮಾಣಕ್ಕಾಗಿ ಪಿಆರ್‌ಕೆ ಸ್ಟುಡಿಯೋಸ್‌ನ ಮುಖ್ಯಸ್ಥೆ, ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ. ಕನ್ನಡ ಚಿತ್ರರಂಗಕ್ಕೆ ನಟಿ ತಾರಾ ಅನುರಾಧಾ ಅವರ ಕೊಡುಗೆಯನ್ನು ಸ್ಮರಿಸಿ, ಈ ಬಾರಿ ವಿಶೇಷ ಪ್ರಶಸ್ತಿಯನ್ನು ನೀಡಲಾಗಿದೆ.

ಕುಮಾರ ಗೋವಿಂದ್‌ (ನಟ, ನಿರ್ಮಾಪಕ), ಸದಾಶಿವ ಶೆಣೈ (ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ), ರಾಜೇಶ್ ಕೃಷ್ಣನ್ (ಹಿನ್ನೆಲೆ ಗಾಯಕ– ಡಾ.ರಾಜ್‌ಕುಮಾರ್‌ ಪ್ರಶಸ್ತಿ), ಸಾಯಿಪ್ರಕಾಶ್‌ ಹಿರಿಯ ನಿರ್ದೇಶಕ, ನಿರ್ಮಾಪಕ (ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ), ತುಳಸಿ (ಹಿರಿಯ ನಟಿ. ಇವರಿಗೆ ನಟಿ ಡಾ. ಜಯಮಾಲಾ ಎಚ್.ಎಂ.ರಾಮಚಂದ್ರ ಪ್ರಶಸ್ತಿ), ನೋಬಿನ್ ಪಾಲ್ (ಅತ್ಯುತ್ತಮ ಸಂಗೀತ ನಿರ್ದೇಶನ, ‘777 ಚಾರ್ಲಿ’ ಚಿತ್ರಕ್ಕಾಗಿ ಎಂ.ಎಸ್. ರಾಮಯ್ಯ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಪ್ರೈ ಲಿ. ಪ್ರಶಸ್ತಿ), ಮಧುಚಂದ್ರ (ಅತ್ಯುತ್ತಮ ಕಥಾಲೇಖಕರು, ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರಕ್ಕಾಗಿ ನಿರ್ದೇಶಕ-ನಿರ್ಮಾಪಕ ಕೆ.ವಿ.ಜಯರಾಂ ಪ್ರಶಸ್ತಿ), ಎಂ.ಜಿ. ಶ್ರೀನಿವಾಸ್ (ಶ್ರೀನಿ) (ಅತ್ಯುತ್ತಮ ಸಂಭಾಷಣೆ, ‘ಓಲ್ಡ್ ಮಾಂಕ್’ ಚಿತ್ರಕ್ಕಾಗಿ ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ), ಕಿರಣ್ ರಾಜ್ (‘777 ಚಾರ್ಲಿ’ ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ ಹಿರಿತೆರೆ-ಕಿರುತೆರೆ ನಿರ್ದೇಶಕ ಬಿ. ಸುರೇಶ ಪ್ರಶಸ್ತಿ), ಪ್ರಮೋದ್ ಮರವಂತೆ (‘ಕಾಂತಾರ’ ಚಿತ್ರದ ‘ಸಿಂಗಾರ ಸಿರಿಯೇ ...’ ಗೀತರಚನೆಗಾಗಿ ಹಿರಿಯ ಪತ್ರಕರ್ತ ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ), ಶ್ರೀನಿವಾಸಮೂರ್ತಿ (ಹಿರಿಯ ಪೋಷಕ ಕಲಾವಿದರು, ಹಿರಿಯ ಪತ್ರಕರ್ತ ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ).

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com