ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಮೋಹನ್ ನಿಧನ

ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ಮಾಪಕ, ನವರಂಗ್ ಚಿತ್ರಮಂದಿರದ ಮಾಲೀಕ ಕೆ.ಸಿ.ಎನ್ ಮೋಹನ್ ಭಾನುವಾರ ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. 
ಹಿರಿಯ ನಿರ್ಮಾಪಕ ಕೆಸಿಎನ್ ಮೋಹನ್ ಅವರ ಸಾಂದರ್ಭಿಕ ಚಿತ್ರ
ಹಿರಿಯ ನಿರ್ಮಾಪಕ ಕೆಸಿಎನ್ ಮೋಹನ್ ಅವರ ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ಮಾಪಕ, ನವರಂಗ್ ಚಿತ್ರಮಂದಿರದ ಮಾಲೀಕ ಕೆ.ಸಿ.ಎನ್ ಮೋಹನ್ ಭಾನುವಾರ ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. 

ವಿಷ್ಣುವರ್ಧನ್ ಅಭಿಯನದ 'ಜಯಸಿಂಹ' ನಟಿ ರಮ್ಯಾ ನಟನೆಯ ‘ಜೂಲಿ’, ರಾಮರಾಜ್ಯದಲ್ಲಿ ರಾಕ್ಷಸರು, ‘ಧರ್ಮ ಯುದ್ಧ, ಶಂಕರ್​ ನಾಗ್​ ನಟನೆ ‘ಭಲೇ ಚತುರು’ ಮುಂತಾದ ಸಿನಿಮಾಗಳನ್ನು ಕೆಸಿಎನ್​ ಮೋಹನ್​ ಅವರು ನಿರ್ಮಾಣ ಮಾಡಿದ್ದಾರೆ. 

ಡಾ. ರಾಜ್​ಕುಮಾರ್​ ಅಭಿನಯದ ಸಿನಿಮಾ ‘ಸತ್ಯ ಹರಿಶ್ಚಂದ್ರ’ ಮತ್ತು ‘ಕಸ್ತೂರಿ ನಿವಾಸ’ ಸಿನಿಮಾವನ್ನು ಕಲರ್​ ಸಿನಿಮಾ ಆಗಿ ಪರಿವರ್ತಿಸಿ ಬಿಡುಗಡೆ ಮಾಡಿದ ಖ್ಯಾತಿ ಕೆಸಿಎನ್​ ಮೋಹನ್​ ಅವರಿಗೆ ಸಲ್ಲುತ್ತದೆ. ಮೋಹನ್​ ಅವರ ಪತ್ನಿ ರೇಣುಕಾ ಮೋಹನ್ ಅವರು ನಿರ್ದೇಶಕಿಯಾಗಿ ಗುರುತಿಸಿಕೊಂಡಿದ್ದರು. 2017ರಲ್ಲಿ ರೇಣುಕಾ ನಿಧನರಾದರು. ಇದೀಗ ನಿರ್ಮಾಪಕ ಕೆಸಿಎನ್ ಮೋಹನ್ ನಿಧನರಾಗಿದ್ದಾರೆ.

ಕೆ.ಸಿ.ಎನ್ ಮೋಹನ್ ಇಂದು ತಮ್ಮ ಇಬ್ಬರು ಪುತ್ರಿಯರು ಮತ್ತು ಓರ್ವ ಮಗನನ್ನು ಆಗಲಿದ್ದಾರೆ. ಅವರ ನಿಧನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಿನಿರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com