ನಿರ್ಮಾಪಕ ಎಂ ಎನ್ ಕುಮಾರ್ ಆರೋಪಗಳ ಸುರಿಮಳೆ: ಚಲನಚಿತ್ರ ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದೇನು?

ನಿರ್ಮಾಪಕ ಎಂ ಎನ್ ಕುಮಾರ್ ಮತ್ತು ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್(Kichcha Sudeep) ನಡುವಿನ ವಿವಾದ ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ.
ಕಿಚ್ಚ ಸುದೀಪ್
ಕಿಚ್ಚ ಸುದೀಪ್

ಬೆಂಗಳೂರು: ನಿರ್ಮಾಪಕ ಎಂ ಎನ್ ಕುಮಾರ್(Producer M N Kumar) ಮತ್ತು ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್(Kichcha Sudeep) ನಡುವಿನ ವಿವಾದ ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಈ ಬಗ್ಗೆ, ಇತ್ತೀಚಿಗೆ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಗಳಿಗೆ ಕಿಚ್ಚ ಸುದೀಪ್ ಅವರು ಪತ್ರ ಬರೆದಿದ್ದು ನ್ಯಾಯಾಲಯದ ಮೊರೆ ಹೋಗಿರುವುದರ ಬಗ್ಗೆ ವಿವರಣೆ ನೀಡಿದ್ದಾರೆ.

ಕಿಚ್ಚ ಸುದೀಪ್ ಬರೆದ ಪತ್ರದ ಸಾರಾಂಶ ಹೀಗಿದೆ: ಕನ್ನಡ ಚಿತ್ರರಂಗದಲ್ಲಿ ನಾನು ಕಳೆದ 27 ವರ್ಷಗಳಿಂದ ಯಾವುದೇ ಕೆಟ್ಟ ಹೆಸರು ಬರದಂತೆ ನಡೆದುಕೊಂಡಿದ್ದೀನಿ. ಈಗ ನನ್ನ ಮೇಲೆ ನಿರಾಧಾರವಾಗಿ ನಿರ್ಮಾಪಕ ಆರೋಪ ಮಾಡಿದ್ದಾರೆ. ಫಿಲಂ ಚೇಂಬರ್ ನಿಂದ ಪತ್ರಕ್ಕೆ ನಾನು ಈಗಾಗಲೇ ಉತ್ತರ ಕೊಟ್ಟಿದ್ದೇನೆ. ಇನ್ನುಮುಂದೆ ಕಾನೂನು ರೀತಿಯಲ್ಲಿ ಬಗೆಹರಿಸಿಕೊಳ್ಳುತ್ತೇನೆ ಎಂದು ನಟ ಕಿಚ್ಚ ಸುದೀಪ್‌ ಹೇಳಿದ್ದಾರೆ.

ಮಾನವೀಯತೆಯ ದೃಷ್ಟಿಯಿಂದ ನಿರ್ಮಾಪಕರಿಗೆ ಸಹಾಯ ಮಾಡಲು ಕೂಡ ನಾನು ಮುಂದಾಗಿದ್ದೆನು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯ ಆಗಲಿಲ್ಲ. ಈಗ ನನ್ನ ಮೇಲೆಯೇ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾನು ಈ ವಿಚಾರವನ್ನು ಕಾನೂನಿನ ರೀತಿಯಲ್ಲಿ ಬಗೆಹರಿಸಲು ನಿರ್ಧರಿದ್ದೇನೆ. ಮಾತೃ ಸಂಸ್ಥೆ ಬಗ್ಗೆ ನನಗೆ ಬಹಳಷ್ಟು ಗೌರವ ಇದೆ. ಕುಮಾರ್ ಅವರ ವೈಯಕ್ತಿಕ ಸಮಸ್ಯೆಗಳಿಗೆ ನಾನು ಕಾರಣ ಅನ್ನೊದು ಸರಿಯಲ್ಲ. ಸೂಕ್ತ ದಾಖಲೆಗಳು ಇಲ್ಲದೆ ಕುಮಾರ್ ಅವರು ಆರೋಪ ಮಾಡುವುದು ಸರಿಯಲ್ಲ. ನಾನು ತಪ್ಪು ಮಾಡಿದ್ದರೆ ನ್ಯಾಯಾಲಯದಲ್ಲಿ ಶಿರ ಬಾಗಿ ದಂಡ ಕಟ್ಟುತ್ತೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

ಪತ್ರದಲ್ಲಿ ಬರೆದ ವಿವರಣೆ ಹೀಗಿದೆ: 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com