ಕೆ.ಡಿ ನಿರ್ದೇಶಕ ಪ್ರೇಮ್ ಜೊತೆ ಚಾಮುಂಡೇಶ್ವರಿ ದೇವಾಲಯಕ್ಕೆ ಬಾಲಿವುಡ್ ನಟ ಸಂಜಯ್ ದತ್ ಭೇಟಿ!

ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಮೈಸೂರಿನಲ್ಲಿ ಬೀಡು ಬಿಟ್ಟಿದ್ದಾರೆ. ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಅವರು ಮೈಸೂರಿನ ಶಕ್ತಿದೇವತೆ ಚಾಮುಂಡೇಶ್ವರಿ ದೇವಸ್ಥಾನ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆಸಂಜಯ್ ದತ್
ಚಾಮುಂಡೇಶ್ವರಿ ದೇವಾಲಯಕ್ಕೆಸಂಜಯ್ ದತ್

ಮೈಸೂರು: ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಮೈಸೂರಿನಲ್ಲಿ ಬೀಡು ಬಿಟ್ಟಿದ್ದಾರೆ. ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಅವರು ಮೈಸೂರಿನ ಶಕ್ತಿದೇವತೆ ಚಾಮುಂಡೇಶ್ವರಿ ದೇವಸ್ಥಾನ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ನಿನ್ನ ಭೀಮನ ಅಮವಾಸ್ಯೆ ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಜಯ್, ‘ಹಲವಾರು ಬಾರಿ ಮೈಸೂರಿಗೆ ಬಂದಿದ್ದರೂ ದೇವಿಯ ದರ್ಶನ ಮಾಡುವುದಕ್ಕೆ ಆಗಿರಲಿಲ್ಲ. ಈ ಬಾರಿ ದೇವಿಯೇ ಕರೆಯಿಸಿಕೊಂಡಿದ್ದಾರೆ ಎನಿಸುತ್ತದೆ. ದೇವಿಯ ದರ್ಶನ ನನಗೆ ಶಾಂತಿ ನೆಮ್ಮದಿ ನೀಡಿದೆ. ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಪ್ರಾರ್ಥಿಸಿದೆ’ ಎಂದಿದ್ದಾರೆ ಸಂಜಯ್.

ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕೆಡಿ ಸಿನಿಮಾದ ಶೂಟಿಂಗ್ ಹಲವು ದಿನಗಳಿಂದ ಮೈಸೂರಿನಲ್ಲಿ ನಡೆಯುತ್ತಿದೆ. ಧ್ರುವ ಸರ್ಜಾ, ಸಂಜಯ್ ದತ್, ರವಿಚಂದ್ರನ್ ಸೇರಿದಂತೆ ಹಲವರು ಈ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸಂಜಯ್ ದತ್ ವಿಲನ್ ರೀತಿಯ ಪಾತ್ರದಲ್ಲಿ ನಟಿಸುತ್ತಿದ್ದರೆ, ಧ್ರುವ ಸರ್ಜಾ ಹಲವು ಗೆಟಪ್ ಗಳಲ್ಲಿ ಕಾಣಿಸಿಕೊಳ್ಳುತ್ತಾರಂತೆ.

ಮೊನ್ನೆಯಷ್ಟೇ `ಕೆಡಿ’ ಸಿನಿಮಾದ ಫೋಟೋವೊಂದು ಲೀಕ್ ಆಗಿದೆ. ಸದ್ಯ ಮೈಸೂರಿನಲ್ಲಿ ಚಿತ್ರದ ಶೂಟಿಂಗ್ ನಡೆದಿದ್ದು, ಈ ಭಾಗದ ಶೂಟಿಂಗ್ ನಲ್ಲಿ ಧ್ರುವ ಸರ್ಜಾ ರೆಟ್ರೋ ಲುಕ್ ನಲ್ಲಿ ಕಂಡಿದ್ದಾರೆ. ಅಭಿಮಾನಿಗಳ ಮಧ್ಯ ಧ್ರುವ ಕಾಣಿಸಿಕೊಂಡಿರುವ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ರೆಟ್ರೋ ಲುಕ್ ನಲ್ಲಿ ಧ್ರುವ ಸಖತ್ ಆಗಿ ಕಾಣುತ್ತಾರೆ. ಕೆವಿಎನ್‌ ನಿರ್ಮಾಣದ ಧ್ರುವ ಸರ್ಜಾ ಮತ್ತು ನಿರ್ದೇಶಕ ಪ್ರೇಮ್ ಕಾಂಬಿನೇಷನ್ ಸಿನಿಮಾ ನಾನಾ ಕಾರಣಗಳಿಂದಾಗಿ  ಸಖತ್ ಸದ್ದು ಮಾಡ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com