'ಭೈರತಿ ರಣಗಲ್' ನನ್ನ ವೃತ್ತಿ ಜೀವನದಲ್ಲಿ ಮಹತ್ವದ ತಿರುವಿನ ಪಾತ್ರ: ರುಕ್ಮಿಣಿ ವಸಂತ್

ಅವರೇ ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರದ ನಾಯಕಿ ರುಕ್ಮಿಣಿ ವಸಂತ್. ಸದ್ಯ ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್‌’ಗೆ ನಾಯಕಿಯಾಗುವ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ.
ರುಕ್ಮಿಣಿ ವಸಂತ್
ರುಕ್ಮಿಣಿ ವಸಂತ್
Updated on

ಸ್ಯಾಂಡಲ್‌ವುಡ್‌ಗೆ ಭರವಸೆಯ ನಟಿ ಸಿಕ್ಕಿದ್ದಾರೆ. ರಿಲೀಸ್ ಆಗಿದ್ದು ಒಂದೇ ಸಿನಿಮಾ ಆಗಿದ್ರೂ ಕೂಡ ಸಾಲು ಸಾಲು ಸಿನಿಮಾ ಅವಕಾಶ ಬಾಚಿಕೊಳ್ಳುತ್ತಿದ್ದಾರೆ.

ಅವರೇ ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರದ ನಾಯಕಿ ರುಕ್ಮಿಣಿ ವಸಂತ್. ಸದ್ಯ ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್‌’ಗೆ ನಾಯಕಿಯಾಗುವ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ.

5 ವರ್ಷಗಳ ಹಿಂದೆ ಬಂದಿದ್ದ ‘ಮಫ್ತಿ’ ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಆಗಿತ್ತು. ಆ ಸಮಯದಲ್ಲೇ ಶಿವಣ್ಣ ಸೀಕ್ವೆಲ್ ಮಾಡುವ ಬಗ್ಗೆ ಮಾತನಾಡಿದ್ದರು. ನಂತರ ಅದು ಸೀಕ್ವೆಲ್ ಅಲ್ಲ ಪ್ರೀಕ್ವೆಲ್ ಅನ್ನೋದ ಖಚಿತವಾಗಿತ್ತು. ಚಿತ್ರದಲ್ಲಿ ಸೆಂಚುರಿ ಸ್ಟಾರ್ ಮಾಫಿಯಾ ಡಾನ್ ‘ಭೈರತಿ ರಣಗಲ್’ ಪಾತ್ರದಲ್ಲಿ ಅಬ್ಬರಿಸಿದ್ದರು. ಇದೀಗ ‘ಭೈರತಿ ರಣಗಲ್’ ಯಾರು? ಆತನ ಹಿನ್ನೆಲೆ ಏನು ಎನ್ನುವುದನ್ನು ತೆರೆ ತರಲಾಗುತ್ತಿದೆ. ಇದೀಗ ಶಿವಣ್ಣಗೆ ಜೋಡಿಯಾಗುವ ನಾಯಕಿಯ ಅನಾವರಣವಾಗಿದೆ.

ಗೀತಾ ಶಿವರಾಜ್‌ಕುಮಾರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ‘ಭೈರತಿ ರಣಗಲ್’ ಚಿತ್ರಕ್ಕೆ ಯುವನಟಿ ರುಕ್ಮಿಣಿ ವಸಂತ್ ನಾಯಕಿ ಎಂದು ಚಿತ್ರತಂಡ ಅನೌನ್ಸ್ ಮಾಡಿದ್ದಾರೆ. ಇತ್ತೀಚಿಗೆ ನಡೆದ ಚಿತ್ರದ ಮುಹೂರ್ತ ಸಮಾರಂಭದಲ್ಲಿ ನಾಯಕಿ ಬಗ್ಗೆ ಕೇಳಲಾದ ಪ್ರಶ್ನೆಗೆ ನಿರ್ದೇಶಕ ನರ್ತನ್ ಪ್ರತಿಕ್ರಿಯೆ ನೀಡಿದ್ದರು. ನಾಯಕಿಯ ಪಾತ್ರಕ್ಕೆ ಬಹಳ ಪ್ರಾಮುಖ್ಯತೆಯಿದೆ.

ಮೊದಲ ಬಾರಿಗೆ ಶಿವರಾಜ್‌ಕುಮಾರ್‌ಗೆ ನಾಯಕಿಯಾಗಿ ತೆರೆಹಂಚಿಕೊಳ್ಳಲು ನಟಿ ರುಕ್ಮಿಣಿ ರೆಡಿಯಾಗಿದ್ದಾರೆ. ಎಂದೂ ಮಾಡಿರದ ಪಾತ್ರದಲ್ಲಿ ನಟಿ ಜೀವತುಂಬಲಿದ್ದಾರೆ. ಜೂನ್ 10ರಿಂದ ಶೂಟಿಂಗ್ ನಡೆಯಲಿದೆ ಎಂದು ಚಿತ್ರತಂಡ ತಿಳಿಸಿದೆ. ಸದ್ಯ ರುಕ್ಮಿಣಿ, ವಿಜಯ್ ಸೇತುಪತಿ ಜೊತೆ ಮಲೇಷಿಯಾದಲ್ಲಿ ತಮಿಳು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಹೆಸರಿಡದ ವಿಜಯ್ ಸೇತುಪತಿ ಚಿತ್ರದ ಚಿತ್ರೀಕರಣವನ್ನು ನಟ ಮಲೇಷ್ಯಾದಲ್ಲಿ ನಡೆಸುತ್ತಿದ್ದಾರೆ.

<strong>ರುಕ್ಮಿಣಿ ವಸಂತ್</strong>
ರುಕ್ಮಿಣಿ ವಸಂತ್

ಘೋಸ್ಟ್’ ಶ್ರೀನಿ ನಿರ್ದೇಶನದ ‘ಬೀರ್‌ಬಲ್’ ಚಿತ್ರಕ್ಕೆ ನಾಯಕಿ ನಟಿಯಾಗಿ ಬೆಂಗಳೂರು ಬ್ಯೂಟಿ ರುಕ್ಮಿಣಿ ಎಂಟ್ರಿ ಕೊಟ್ಟರು. ಮೊದಲ ಸಿನಿಮಾದಲ್ಲೇ ನಟಿ ಗಮನ ಸೆಳೆದರು. ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ‘ಬಾನದಾರಿಯಲಿ’, ರಕ್ಷಿತ್ ಶೆಟ್ಟಿ ಜೊತೆ ‘ಸಪ್ತಸಾಗರದಾಚೆ ಎಲ್ಲೋ’, ಶ್ರೀಮುರಳಿ ಜೊತೆ ‘ಬಘೀರ’ ಸಿನಿಮಾ ತೆರೆಗೆ ಬರೋದ್ದಕ್ಕೆ ರೆಡಿಯಾಗಿದೆ.

ಈ ಪಾತ್ರಕ್ಕಾಗಿ ನನ್ನನ್ನು ಸಂಪರ್ಕಿಸಿದಾಗ, ನನ್ನ ಪಾತ್ರದ ಬಗ್ಗೆ ತಿಳಿದಾಗ, ನಾನು ಎರಡನೇ ಆಲೋಚನೆಯಿಲ್ಲದೆ ತಕ್ಷಣವೇ ಅವಕಾಶವನ್ನು ಪಡೆದುಕೊಂಡೆ. ಇದು ನನ್ನ ವೃತ್ತಿಜೀವನದ ಮಹತ್ವದ ತಿರುವುಗಳಲ್ಲಿ ನಿಸ್ಸಂದೇಹವಾಗಿ ಒಂದಾಗಿದೆ ಎಂದಿದ್ದಾರೆ. ಮನರಂಜನೆ ಮತ್ತು ಅರ್ಥಪೂರ್ಣ ಮೌಲ್ಯವುಳ್ಳ ಸಿನಿಮಾ ಕಥೆಯಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com