ವಿಜಯ್ ವರ್ಮಾ ಜೊತೆ ಡೇಟಿಂಗ್ ವಿಚಾರ: ಆತ ನನ್ನ 'ಖುಷಿಯ ಖಜಾನೆ' ಎಂದ ಮಿಲ್ಕಿ ಬ್ಯೂಟಿ
ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಈಗ ಬಹುಭಾಷಾ ನಟಿ. ತೆಲುಗು, ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ತಮನ್ನಾ ಇತ್ತೀಚೆಗೆ ಬಾಲಿವುಡ್ನಲ್ಲಿಯೂ ಸಾಲು-ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.
ಇಷ್ಟು ದಿನ ಆಗೊಮ್ಮೆ ಈಗೊಮ್ಮೆ ತಮನ್ನಾ ಹೆಸರು ಕೆಲವು ದಕ್ಷಿಣದ ನಟರೊಟ್ಟಿಗೆ ಕೇಳಿ ಬರುತ್ತಿತ್ತು. ಆದರೆ ಇತ್ತೀಚೆಗೆ ಬಾಲಿವುಡ್ ನಟನೊಬ್ಬನೊಟ್ಟಿಗೆ ತಮನ್ನಾ ಹೆಸರು ಗಾಢವಾಗಿ ಕೇಳಿ ಬಂದಿದ್ದು ಇದೀಗ ಸ್ವತಃ ತಮನ್ನಾ ತಮ್ಮ ಪ್ರೇಮ ಸಂಬಂಧದ ವಿಷಯ ಬಹಿರಂಗಗೊಳಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ವರ್ಮಾ ಜೊತೆ ತಮನ್ನಾ ಲಿಪ್ ಲಾಕ್ ಮಾಡಿಕೊಂಡ ವೀಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ ವಿಚಾರವನ್ನು ತಳ್ಳಿ ಹಾಕಿದ್ದರು.
ನಾವಿಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿದ್ದೇವೆ. ಇಂಥ ವದಂತಿಗಳು ಎಲ್ಲಾ ಕಡೆ ಹರಿದಾಡುತ್ತಲೇ ಇರುತ್ತದೆ. ಇಂಥ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದು ಮತ್ತು ಸ್ಪಷ್ಟೀಕರಣ ಕೊಡುವ ಅನಿವಾರ್ಯತೆ ಇಲ್ಲ. ಅದರ ಬಗ್ಗೆ ನಾನು ಹೆಚ್ಚು ಏನು ಹೇಳಲ್ಲ ಎಂದಿದ್ದರು.
ಆದರೆ, ಇದೀಗ ಡೇಟಿಂಗ್ ಕುರಿತು ಭಿನ್ನ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯ್ ವರ್ಮಾ ಜೊತೆ ತಾವು ಲವ್ ಮಾಡುತ್ತಿರುವ ವಿಚಾರವನ್ನು ಒಪ್ಪಿಕೊಂಡಿದ್ದಾರೆ. ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರೂ ʻಲಸ್ಟ್ ಸ್ಟೋರಿ -2′ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಸಿನಿಮಾ ಸೆಟ್‌ನಲ್ಲಿ ಮೊದಲು ಭೇಟಿಯಾಗಿದ್ದರು. ಅಲ್ಲಿಂದ ಪ್ರಾರಂಭವಾದ ಇವರ ಸ್ನೇಹ ಬಳಿಕ ಪ್ರೀತಿಯಾಗಿದೆ ಎಂದು ಹೇಳಿದ್ದಾರೆ.
ವಿಜಯ್ ವರ್ಮಾ ನನ್ನ ಖುಷಿಯ ಖಜಾನೆ ಎಂದು ಬಣ್ಣಿಸಿದ್ದು, ನಮ್ಮ ಸಂಬಂಧ ಬಹಳ ನೈಸರ್ಗಿಕ ರೀತಿಯಲ್ಲಿ ಯಾವುದೇ ಒತ್ತಡಗಳಿಲ್ಲದೆ ಶುರುವಾಯ್ತು ಎಂದು ಹೇಳಿಕೊಂಡಿದ್ದಾರೆ. ಮತ್ತು ಇಬ್ಬರೂ ಒಟ್ಟಿಗೆ ನಟಿಸಿರುವ ಲಸ್ಟ್ ಸ್ಟೊರೀಸ್ 2 ಸಿನಿಮಾದ ಸೆಟ್ನಲ್ಲಿಯೇ ನಮ್ಮ ಪ್ರೀತಿ ಶುರುವಾಯಿತು ಎಂದು ಸಹ ತಮನ್ನಾ ಹೇಳಿಕೊಂಡಿದ್ದಾರೆ.
ಆದರೆ ಕೆಲವು ದಿನಗಳ ನಂತರ ಸಂದರ್ಶನವೊಂದರಲ್ಲಿ ತಮ್ಮ ಹಾಗೂ ವಿಜಯ್ ಬಗೆಗಿನ ಸುದ್ದಿಗಳ ಬಗ್ಗೆ ಮಾತನಾಡಿ, ಅವೆಲ್ಲ ಗಾಳಿಸುದ್ದಿ ಆ ಬಗ್ಗೆ ನಾನು ಸ್ಪಷ್ಟನೆ ನೀಡಬೇಕಿಲ್ಲ ಎಂದಿದ್ದರು. ಆದರೆ ಈಗ ತಮ್ಮ ಹಾಗೂ ವಿಜಯ್ ನಡುವಿನ ಸಂಬಂಧವನ್ನು ಒಪ್ಪಿಕೊಂಡಿದ್ದಾರೆ.