ಕೊಡಗಿನ ಬೆಡಗಿಗೆ ಭಾರೀ ವಂಚನೆ: ನಟಿ ರಶ್ಮಿಕಾ ಮಂದಣ್ಣ ಮ್ಯಾನೇಜರ್ ಕಿಕ್ ಔಟ್!

ಕಿರಿಕ್‌ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣಗೆ ಲಕ್ಷಾಂತರ ರೂಪಾಯಿಯ ವಂಚನೆಯಾಗಿದೆ ಎನ್ನುವುದರ ಬಗ್ಗೆ ಸುದ್ದಿಯಾಗಿದೆ. ನಟಿಯ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್‌ ಅವರಿಂದ 80 ಲಕ್ಷ ರೂ. ವಂಚನೆಯಾಗಿದೆ.
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
Updated on

ಕಿರಿಕ್‌ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣಗೆ ಲಕ್ಷಾಂತರ ರೂಪಾಯಿಯ ವಂಚನೆಯಾಗಿದೆ ಎನ್ನುವುದರ ಬಗ್ಗೆ ಸುದ್ದಿಯಾಗಿದೆ. ನಟಿಯ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್‌ ಅವರಿಂದ 80 ಲಕ್ಷ ರೂ. ವಂಚನೆಯಾಗಿದೆ

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರ ವೃತ್ತಿ ಜೀವನದ ಆರಂಭದಿಂದಲೇ ಈ ವ್ಯಕ್ತಿಯು ಮ್ಯಾನೇಜರ್ ಆಗಿ ನೇಮಕಗೊಂಡಿದ್ದರು. ರಶ್ಮಿಕಾ ಮಂದಣ್ಣ ಅವರ ಎಲ್ಲ ಹಣಕಾಸಿನ ವ್ಯವಹಾರವನ್ನು ಈ ವ್ಯಕ್ತಿಯೇ ನಿಭಾಯಿಸುತ್ತಿದ್ದರು.

ಆದರೆ ರಶ್ಮಿಕಾಗೇ ಗೊತ್ತಿಲ್ಲದಂತೆ ಸುಮಾರು 80 ಲಕ್ಷ ರೂಪಾಯಿಗಳಷ್ಟು ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪ ಮ್ಯಾನೇಜರ್‌ ಮೇಲೆ ಕೇಳಿಬಂದಿದೆ. ಇದು ಗೊತ್ತಾಗುತ್ತಿದ್ದಂತೆಯೇ, ಮ್ಯಾನೇಜರ್‌ಗೆ ಗೇಟ್‌ಪಾಸ್ ಕೊಟ್ಟಿದ್ದಾರೆ ರಶ್ಮಿಕಾ ಮಂದಣ್ಣ. ಆದರೆ ಈ ಮ್ಯಾನೇಜರ್‌ ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ.

ಇಷ್ಟೊಂದು ದೊಡ್ಡ ಮೊತ್ತದ ವಂಚನೆ ಆಗಿದ್ದರೂ ಕೂಡ ರಶ್ಮಿಕಾ ಈ ಪ್ರಕರಣವನ್ನು ಸೈಲೆಂಟ್ ಆಗಿ ಹ್ಯಾಂಡಲ್ ಮಾಡಿದ್ದಾರೆ. ಯಾವುದೇ ಸೀನ್ ಕ್ರಿಯೆಟ್ ಮಾಡದೇ, ಮ್ಯಾನೇಜರ್‌ ಹುದ್ದೆಯಿಂದ ಆತನನ್ನು ಕಿತ್ತೆಸೆದಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com