ಸುದೀಪ್ ಮುಂದಿನ ಸಿನಿಮಾಗೆ ಚೊಚ್ಚಲ ನಿರ್ದೇಶಕ ವಿಜಯ್ ಆ್ಯಕ್ಷನ್ ಕಟ್?

ವಿಕ್ರಾಂತ್ ರೋಣ ಬಿಡುಗಡೆಯಾಗಿ ಏಳು ತಿಂಗಳಾದರೂ ಕಿಚ್ಚ ಸುದೀಪ್ ತಮ್ಮ ಮುಂದಿನ ಚಿತ್ರಕ್ಕೆ ಸಹಿ ಹಾಕಿಲ್ಲ.  ರಿಯಾಲಿಟಿ ಶೋ, ಬಿಗ್ ಬಾಸ್‌ನಲ್ಲಿ ಸುದೀಪ್ ನಿರತರಾಗಿದ್ದಾರೆ, ಇದರ ಜೊತೆಗೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಬ್ಯುಸಿಯಾಗಿದ್ದಾರೆ.
ಸುದೀಪ್
ಸುದೀಪ್
Updated on

ವಿಕ್ರಾಂತ್ ರೋಣ ಬಿಡುಗಡೆಯಾಗಿ ಏಳು ತಿಂಗಳಾದರೂ ಕಿಚ್ಚ ಸುದೀಪ್ ತಮ್ಮ ಮುಂದಿನ ಚಿತ್ರಕ್ಕೆ ಸಹಿ ಹಾಕಿಲ್ಲ.  ರಿಯಾಲಿಟಿ ಶೋ, ಬಿಗ್ ಬಾಸ್‌ನಲ್ಲಿ ಸುದೀಪ್ ನಿರತರಾಗಿದ್ದಾರೆ, ಇದರ ಜೊತೆಗೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಬ್ಯುಸಿಯಾಗಿದ್ದಾರೆ.

<strong>ಸುದೀಪ್</strong>
ಸುದೀಪ್

ಸುದೀಪ್ ಮುುಂದಿನ ಸಿನಿಮಾ ಬಗ್ಗೆ ಸಾಕಷ್ಚು ಕುತೂಹಲ ಮೂಡಿದೆ. ಸದ್ಯ ಕಿಚ್ಚನ ಅಭಿಮಾನಿಗಳಿಗೆ ಒಂದು ಚಿಕ್ಕ ಅಪ್ ಡೇಟ್ ಇದೆ. ಏಪ್ರಿಲ್ ನಿಂದ ಮುಂದಿನ ಸಿನಿಮಾ ಕೆಲಸ ಆರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಬಾಲಿ ನಿರ್ಮಾಪಕ ಕಲೈಪುಲಿ ಎಸ್ ಥಾನು ಅವರೊಂದಿಗೆ ಸುದೀಪ್ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿವೆ. ಸುದೀಪ್ ಚೊಚ್ಚಲ ನಿರ್ದೇಶಕ ವಿಜಯ್ ಅವರೊಂದಿಗೆ ಸಿನಿಮಾ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿಗೆ. ಚಿತ್ರವು ಕನ್ನಡ-ತಮಿಳು ದ್ವಿಭಾಷಾ ಚಿತ್ರವಾಗಿದ್ದು, ಶೀಘ್ರವೇ ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ.

ಇದಲ್ಲದೆ, ಸುದೀಪ್ ಅವರು ವಿಕ್ರಾಂತ್ ರೋಣ ನಿರ್ದೇಶಕ ಅನುಪ್ ಭಂಡಾರಿ ಅವರೊಂದಿಗೆ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ಸದ್ಯ ಸಿನಿಮಾ ಪ್ರಿ-ಪ್ರೊಡಕ್ಷನ್ ಹಂತದಲ್ಲಿದೆ ಮತ್ತು ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗುವ  ಸಾಧ್ಯತೆಯಿದೆ. ಏತನ್ಮಧ್ಯೆ, ಉಪೇಂದ್ರ ಅಭಿನಯದ ಆರ್ ಚಂದ್ರು ಅವರ ಕಬ್ಜದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ, ಇದು ಮಾರ್ಚ್ 17 ರಂದು ಥಿಯೇಟರ್‌ಗಳಿಗೆ ಬರಲು ಸಿದ್ಧವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com