ಬೆಂಗಳೂರು: ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ಜನ್ಮದಿನಕ್ಕೆ ಅವರ ಹಿರಿಯ ಸಹೋದರ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಅವರು ಶುಭಾಶಯ ಕೋರಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಶೇಷ ಬರಹ ಹಂಚಿಕೊಂಡು ಪ್ರೀತಿಯ ಅಪ್ಪುವನ್ನು ಕೊಂಡಾಡಿದ್ದಾರೆ.
ನೀನು ಹುಟ್ಟಿದಾಗ ನಮ್ಮ ಮನೆಯಲ್ಲಿ ಉಲ್ಲಾಸ ಉಕ್ಕಿ ಹರಿಯುತ್ತಿತ್ತು. ನಿನ್ನ ಕಣ್ಣಲ್ಲಿದ್ದ ಹೊಳಪು ನೀನು ಪವರ್ ಸ್ಟಾರ್ ಆಗೋದನ್ನ ಆವಾಗ್ಲೇ ಹೇಳ್ತಾ ಇತ್ತು. ನೀನು ನಕ್ಕರೆ ಎಲ್ರು ನಗ್ತಾ ಇದ್ರು. ನೀನು ಕುಣಿದರೆ ಎಲ್ಲರೂ ರೋಮಾಂಚನದಿಂದ ನೋಡ್ತಾ ಇದ್ರು, ನೀನು ಕುಣಿದರೆ ಎಲ್ಲರೂ ರೋಮಾಂಚನದಿಂದ ನೋಡ್ರಾ ಇದ್ರು, ಮನೆಗೆ ಬಂದ ಅತಿಥಿ ನೆಂಟರುಗಳಿಗೆಲ್ಲ ನೀನೇ ಬೇಕು. ಅಂತಹ ಪುಟ್ಟ ಅಪ್ಪು ಮಿಂಚಿನಂತೆ ತೆರೆಯ ಮೇಲೆ ಬಂದು ಹೆಮ್ಮರವಾಗಿ, ಕೋಟ್ಯಾಂತರ ಜನರಿಗೆ ನೆರಳಾಗಿದ್ದನ್ನು ಹತ್ತಿರದಿಂದ ನೋಡಿದ ನಾನೇ ಪುನೀತ.
ನಿನ್ನನು ಎತ್ತಿ ಆಡಿಸಿದ ಅಣ್ಣನಾಗಿ, ನಿನ್ನ ಜೊತೆ ಕೂಡಿ ಆಡಿದ ಸ್ನೇಹಿತನಾಗಿ, ನಿನ್ನ ಕೆಲಸಗಳನ್ನು ಮೆಚ್ಚಿ ಅಪ್ಪಿಕೊಂಡ ಕನ್ನಡಿಗನಾಗಿ, ಹಬ್ಬ ಯಾವುದೇ ಆಗಿದ್ರೂ ನಿನ್ನ ಹೆಸರಿನಲ್ಲಿ ಪಟಾಕಿಗಳನ್ನು ಹಚ್ಚೋ ಅಭಿಮಾನಿಗಳಲ್ಲಿ ಒಬ್ಬನಾಗಿ ಹೇಳ್ತಾ ಇದೀನಿ, ನೀನು ಹುಟ್ಟಿದ್ದೇ ಒಂದು ಉತ್ಸವ. ನೀನು ಬೆಳೆದಿದ್ದು ಇತಿಹಾಸ, ನಿನ್ನ ಜೀವನ ಒಂದು ದಂತಕಥೆ. ನಿನ್ನ ನೆನಪುಗಳು ಎಂದಿಗೂ ಅಮರ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪು ಎಂದು ಬರೆದುಕೊಂಡಿದ್ದಾರೆ.
Advertisement