ಮಲಯಾಳಂನ ಜನಪ್ರಿಯ ನಟ ಇನ್ನೋಸೆಂಟ್ ನಿಧನ

ಮಲಯಾಳಂನ ಜನಪ್ರಿಯ ನಟ ಹಾಗೂ  ಮಾಜಿ ಲೋಕಸಭಾ ಸದಸ್ಯ ಇನ್ನೋಸೆಂಟ್ ಭಾನುವಾರ ತಡರಾತ್ರಿ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಇನ್ನೋಸೆಂಟ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮಲಯಾಳಂ ನಟ ಇನ್ನೋಸೆಂಟ್
ಮಲಯಾಳಂ ನಟ ಇನ್ನೋಸೆಂಟ್
Updated on

ಕೊಚ್ಚಿ: ಮಲಯಾಳಂನ ಜನಪ್ರಿಯ ನಟ ಹಾಗೂ  ಮಾಜಿ ಲೋಕಸಭಾ ಸದಸ್ಯ ಇನ್ನೋಸೆಂಟ್ ಭಾನುವಾರ ತಡರಾತ್ರಿ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಇನ್ನೋಸೆಂಟ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಭಾನುವಾರ ರಾತ್ರಿ 10.30ರ ಸುಮಾರಿಗೆ ಇನ್ನೋಸೆಂಟ್ ಅವರ ಅರೋಗ್ಯ ಪರಿಸ್ಥಿತಿ ತೀವ್ರ ರೀತಿಯಲ್ಲಿ ಹದಗೆಟ್ಟ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರು ಚಿಕಿತ್ಸೆ ಪಡೆಯುತ್ತಿದ್ದ ಲೇಕ್‌ಶೋರ್ ಆಸ್ಪತ್ರೆಯು ಹೇಳಿಕೆಯಲ್ಲಿ ತಿಳಿಸಿದೆ.

ಸುಮಾರು 500ಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ಹಾಸ್ಯ ನಟನಾಗಿ ನಟಿಸಿರುವ ಇನ್ನೋಸೆಂಟ್, ಎಡಪಕ್ಷಗಳ ಬೆಂಬಲದೊಂದಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದ ನಂತರ 2014 ರಿಂದ 2019 ರವರೆಗೆ ಕೇರಳದ ಚಾಲಕ್ಕುಡಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಕಾರ್ಯನಿರ್ವಹಿಸಿದ್ದರು. ಅವರು ಹಲವಾರು ವರ್ಷಗಳ ಕಾಲ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. 

2012 ರಲ್ಲಿ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆದು ಬದುಕುಳಿದಿದ್ದರು. ಆದರೆ, ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಮಾರ್ಚ್ 3 ರಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೋಸೆಂಟ್ ಅವರ ನಿಧನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಸಂತಾಪ ಸೂಚಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com