ಐಪಿಎಲ್ 2023: ಉದ್ಘಾಟನಾ ಸಮಾರಂಭದಲ್ಲಿ 'ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ ರಶ್ಮಿಕಾ! ವಿಡಿಯೋ 

ಗುಜರಾತಿನ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಆರಂಭವಾದ ಐಪಿಎಲ್ 2023 ಉದ್ಘಾಟನಾ ಸಮಾರಂಭದಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮಸ್ತ್ ಸ್ಟೆಪ್ ಹಾಕುವ ಮೂಲಕ ನೆರೆದಿದ್ದ ಕ್ರೀಡಾಭಿಮಾನಿಗಳನ್ನು ರಂಜಿಸಿದ್ದಾರೆ. 
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
Updated on

ಅಹಮದಾಬಾದ್: ಗುಜರಾತಿನ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಆರಂಭವಾದ ಐಪಿಎಲ್-2023 ಉದ್ಘಾಟನಾ ಸಮಾರಂಭದಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮಸ್ತ್ ಸ್ಟೆಪ್ ಹಾಕುವ ಮೂಲಕ ನೆರೆದಿದ್ದ ಕ್ರೀಡಾಭಿಮಾನಿಗಳನ್ನು ರಂಜಿಸಿದ್ದಾರೆ. 

ಇತ್ತೀಚಿಗೆ ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡ ತೆಲುಗಿನ ಬ್ಲಾಕ್ ಬಸ್ಟರ್ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಗೂ ಪುಷ್ಪಾ ಸಿನಿಮಾದ 'ಸಾಮಿ ಸಾಮಿ' ಹಾಡಿಗೆ ರಶ್ಮಿಕಾ ನೃತ್ಯ ಪ್ರದರ್ಶನ ಮಾಡಿದ್ದಾರೆ.  

ಮೂಲತ: ಕನ್ನಡದ ರಶ್ಮಿಕಾ ಮಂದಣ್ಣ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ಅಭಿನಯಿಸುವ ಮೂಲಕ ದೇಶಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಆಗಾಗ್ಗೆ ಅಷ್ಟೇ ಟ್ರೋಲ್ ಕೂಡಾ ಆಗುತ್ತಾರೆ. ಐಪಿಎಲ್ ಉದ್ಘಾಟನಾ ಸಮಾರಂಭದಲ್ಲೂ ಸಾಮಿ ಸಾಮಿ ಹಾಡಿಗೆ ನೃತ್ಯ ಮಾಡಿರುವುದಕ್ಕೆ ಕೆಲವರು 'ರಶ್ಮಿಕಾ ಮಂಗಣ್ಣ' ಎಂದು ಕರೆದು ಟ್ರೋಲ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com