ಚಿಕ್ಕಣ್ಣ ನಟನೆಯ ಉಪಾಧ್ಯಕ್ಷ ಡಿಸೆಂಬರ್ ನಲ್ಲಿ ರಿಲೀಸ್ ಸಾಧ್ಯತೆ!
ಹಾಸ್ಯನಟ ಚಿಕ್ಕಣ್ಣ ನಾಯಕನಾಗಿ ಅಭಿನಯಿಸಿರುವ ಉಪಾಧ್ಯಕ್ಷ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಅನಿಲ್ ಕುಮಾರ್ ನಿರ್ದೇಶನದ ಮತ್ತು ಉಮಾಪತಿ ಫಿಲಂಸ್ ಮತ್ತು ಡಿಎನ್ ಫಿಲ್ಮ್ಸ್ ನಿರ್ಮಾಣದ ಈ ಚಿತ್ರದ ಟೀಸರ್ ಮತ್ತು ಒಂದೆರಡು ಹಾಡುಗಳನ್ನು ಇತ್ತೀಚೆಗೆ ರಿಲೀಸ್ ಆಗಿದೆ
ಈ ಚಿತ್ರದಲ್ಲಿ ಚಿಕ್ಕಣ್ಣ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿದ್ದು ಗಮನ ಸೆಳೆದಿದ್ದಾರೆ. ಮಲೈಕಾ ವಸುಪಾಲ್ ನಾಯಕಿಯಾಗಿ ನಟಿಸಿರುವ ಈ ಚಿತ್ರಕ್ಕೆ ಮಾರ್ಟಿನ್ ನಿರ್ದೇಶಕ ಎಪಿ ಅರ್ಜುನ್ ಸಾಹಿತ್ಯ ಬರೆದಿದ್ದಾರೆ. ಈ ಹಾಡು ಬಿಡುಗಡೆಯಾದಾಗಿನಿಂದ ಗಮನ ಸೆಳೆದಿದೆ.
ಉಪಾಧ್ಯಕ್ಷ ಎಂಬ ಶೀರ್ಷಿಕೆಯನ್ನು ಶರಣ್ ಅವರ ಅಧಕ್ಷ್ಯದಲ್ಲಿ ಚಿತ್ರಿಸಿದ ಚಿಕ್ಕಣ್ಣ ಪಾತ್ರದಿಂದ ಪಡೆಯಲಾಗಿದೆ. 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯ ಪಾತ್ರಗಳಿಗೆ ಹೆಸರುವಾಸಿಯಾದ ಚಿಕ್ಕಣ್ಣ, ಇತ್ತೀಚೆಗೆ ಹಾಸ್ಯ ಮನರಂಜನಾ ಪ್ರಧಾನ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಉಪಾಧ್ಯಕ್ಷ ಡಿಸೆಂಬರ್‌ನಲ್ಲಿ ತೆರೆಗೆ ಬರುವ ಸಾಧ್ಯತೆಯಿದೆ, ತಂಡವು ಸದ್ಯ ಪೋಸ್ಟ್-ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ