ಚೀತಾ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್‌ಗೆ ಜೊತೆ ಜೊತೆಯಲಿ ಖ್ಯಾತಿಯ ಮೇಘಾ ಶೆಟ್ಟಿ ಜೋಡಿ!

ನಟ ಪ್ರಜ್ವಲ್ ದೇವರಾಜ್ ಸದ್ಯ ನೃತ್ಯ ಸಂಯೋಜಕ-ನಿರ್ದೇಶಕ ರಾಜಾ ಕಲೈ ಕುಮಾರ್ ಅವರ ಚೊಚ್ಚಲ ಸಿನಿಮಾ 'ಚೀತಾ' ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರವು ಈ ವಾರವಷ್ಟೇ ಸೆಟ್ಟೇರಿದ್ದು, ಇತ್ತೀಚಿನ ಅಪ್ಡೇಟ್ಸ್ ಪ್ರಕಾರ, ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ಈಗ ಚಿತ್ರತಂಡ ಸೇರಿಕೊಂಡಿದ್ದಾರೆ.
ಮೇಘಾ ಶೆಟ್ಟಿ
ಮೇಘಾ ಶೆಟ್ಟಿ

ನಟ ಪ್ರಜ್ವಲ್ ದೇವರಾಜ್ ಸದ್ಯ ನೃತ್ಯ ಸಂಯೋಜಕ-ನಿರ್ದೇಶಕ ರಾಜಾ ಕಲೈ ಕುಮಾರ್ ಅವರ ಚೊಚ್ಚಲ ಸಿನಿಮಾ 'ಚೀತಾ' ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರವು ಈ ವಾರವಷ್ಟೇ ಸೆಟ್ಟೇರಿದ್ದು, ಇತ್ತೀಚಿನ ಅಪ್ಡೇಟ್ಸ್ ಪ್ರಕಾರ, ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ಈಗ ಚಿತ್ರತಂಡ ಸೇರಿಕೊಂಡಿದ್ದಾರೆ. ಸದ್ಯದ ಶೂಟಿಂಗ್ ಶೆಡ್ಯೂಲ್‌ನಲ್ಲಿ ಕೂಡ ಭಾಗವಹಿಸಿದ್ದಾರೆ ಎಂದು ಹೇಳಲಾಗಿದೆ.

ದಕ್ಷಿಣ ಭಾರತದ ನಟಿ ಆಶಿಮಾ ನರ್ವಾಲ್ ಈ ಚಿತ್ರದ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ ಎಂದು ನಾವು ವರದಿ ಮಾಡಿದ್ದೆವು. ದುರದೃಷ್ಟವಶಾತ್, ಡೇಟ್ಸ್ ಹೊಂದಿಕೆಯಾಗದ ಕಾರಣ, ಆಶಿಮಾ ಈ ಸಿನಿಮಾದಿಂದ ಹೊರನಡೆದಿದ್ದಾರೆ. ಈಗ ನಾಯಕಿಯಾಗಿ ಮೇಘಾ ಶೆಟ್ಟಿ ನಟಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಮನೆ ಮಾತಾದ ಮೇಘಾ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಟ್ರಿಬಲ್ ರೈಡಿಂಗ್‌' ಮೂಲಕ ತಮ್ಮ ಸಿನಿ ಜರ್ನಿಯನ್ನು ಪ್ರಾರಂಭಿಸಿದರು. ನಂತರ ದಿಲ್ ಪಸಂದ್ ಚಿತ್ರದಲ್ಲೂ ಕಾಣಿಸಿಕೊಂಡರು.

ಇದೀಗ ಅವರು ನಿರ್ದೇಶಕ ದೇವನೂರು ಚಂದ್ರು ಅವರ ಗ್ರಾಮಾಯಣ ಚಿತ್ರದಲ್ಲೂ ನಾಯಕಿಯಾಗಿದ್ದಾರೆ. ರಾಜಲಕ್ಷ್ಮಿ ಎಂಟರ್‌ಟೈನ್‌ಮೆಂಟ್‌ ಅಡಿ ಪ್ರತಿಭಾ ನರೇಶ್ ನಿರ್ಮಿಸಿದ ಈ ಚಿತ್ರದಲ್ಲಿ ನಟ ವಿನಯ್ ರಾಜ್‌ಕುಮಾರ್ ಮತ್ತು ಯೋಗಿ ಸಹ ನಟಿಸಿದ್ದಾರೆ. ತೆಲುಗು ನಟ ಸುನೀಲ್ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರೊಂದಿಗೆ ನಟಿ ಶ್ರುತಿ ಹರಿಹರನ್ ಕೂಡ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com