ಗಣೇಶ್, ರುಕ್ಮಿಣಿ ವಸಂತ್, ರೀಷ್ಮಾ ನಾಣಯ್ಯ ನಟನೆಯ 'ಬಾನದಾರಿಯಲ್ಲಿ' ಒಟಿಟಿಯಲ್ಲಿ ಬಿಡುಗಡೆ

ಸೆಪ್ಟೆಂಬರ್ 15 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಬಾನದರಿಯಲ್ಲಿ' ಸಿನಿಮಾ ಇದೀಗ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿದೆ. ಪ್ರೀತಂ ಗುಬ್ಬಿ ನಿರ್ದೇಶನದ ಈ ಸಿನಿಮಾ ಸಿನಿಪ್ರಿಯರಿಂದ ಸಕಾರಾತ್ಮಕ ಮೆಚ್ಚುಗೆಗೆ ಪಾತ್ರವಾಯಿತು.
ಬಾನದಾರಿಯಲ್ಲಿ ಸಿನಿಮಾದ ಪೋಸ್ಟರ್
ಬಾನದಾರಿಯಲ್ಲಿ ಸಿನಿಮಾದ ಪೋಸ್ಟರ್
Updated on

ಸೆಪ್ಟೆಂಬರ್ 28 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಬಾನದರಿಯಲ್ಲಿ' ಸಿನಿಮಾ ಇದೀಗ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿದೆ. ಪ್ರೀತಂ ಗುಬ್ಬಿ ನಿರ್ದೇಶನದ ಈ ಸಿನಿಮಾ ಸಿನಿಪ್ರಿಯರಿಂದ ಸಕಾರಾತ್ಮಕ ಮೆಚ್ಚುಗೆಗೆ ಪಾತ್ರವಾಯಿತು.

ಚಿತ್ರದಲ್ಲಿ ಗಣೇಶ್ ಕ್ರಿಕೆಟಿಗನಾಗಿ ನಟಿಸಿದ್ದರೆ, ಅವರೊಂದಿಗೆ ರುಕ್ಮಿಣಿ ವಸಂತ್ ಮತ್ತು ರೀಷ್ಮಾ ನಾಣಯ್ಯ ಕೂಡ ನಟಿಸಿದ್ದಾರೆ. ಈ ಚಿತ್ರವು ಪ್ರೀತಂ ಜೊತೆ ಗಣೇಶ್ ಅವರ ನಾಲ್ಕನೇ ಚಿತ್ರವಾಗಿದೆ. ನಿರ್ದೇಶಕರು ಈ ಹಿಂದೆ ಯೋಗರಾಜ್ ಭಟ್ ನಿರ್ದೇಶನದ ಮುಂಗಾರು ಮಳೆ ಸಿನಿಮಾದಲ್ಲಿ ಸಹ-ಬರಹಗಾರರಾಗಿ ಕೆಲಸ ಮಾಡಿದ್ದರು. ಬಳಿಕ ಮಳೆಯಲಿ ಜೊತೆಯಲಿ, ದಿಲ್ ರಂಗೀಲಾ ಮತ್ತು 99 ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು.

ಬಾನದಾರಿಯಲ್ಲಿ ಚಿತ್ರಕ್ಕೆ ಛಾಯಾಗ್ರಾಹಕಿ ಪ್ರೀತಾ ಜಯರಾಮನ್ ಕಥೆ ಬರೆದಿದ್ದು, ಪ್ರೀತಂ ಅವರು ಚಿತ್ರಕಥೆ ಬರೆದಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದು, ಅರ್ಮನ್ ಮಲಿಕ್ ಹಾಡಿರುವ ಹಾಡನ್ನು ದಿವಂಗತ ನಟ ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಿಡುಗಡೆ ಮಾಡಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com