ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಸಿನಿಮಾದ ಸ್ಟಿಲ್
ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಸಿನಿಮಾದ ಸ್ಟಿಲ್

ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆ, ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್!

ಹೇಮಂತ್ ಎಂ ರಾವ್ ನಿರ್ದೇಶನದ ಮತ್ತು ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಮತ್ತು ಚೈತ್ರಾ ಜೆ ಆಚಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಮುಂಬರುವ ಕನ್ನಡ ಚಲನಚಿತ್ರ 'ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ' ಚಿತ್ರತಂಡ ಶುಕ್ರವಾರ ಟೈಟಲ್ ಟ್ರ್ಯಾಕ್ ಅನ್ನು ಬಿಡುಗಡೆ ಮಾಡಿದೆ. 
Published on

ಧನಂಜಯ್ ರಂಜನ್ ಅವರ ಸಾಹಿತ್ಯವಿರುವ ಈ ಹಾಡಿಗೆ ಚರಣ್‌ರಾಜ್ ಎಂಆರ್ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡನ್ನು ಕಾರ್ತಿಕ್ ಚೆನ್ನೋಜಿ ರಾವ್ ಹಾಡಿದ್ದಾರೆ. ಚಿತ್ರ ನವೆಂಬರ್ 17ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಹಾಡು ಪರಂವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದ್ದು, ಸದ್ಯ ಟ್ರೆಂಡಿಂಗ್ ಆಗಿದೆ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾವನ್ನು ಎರಡು ಭಾಗವಾಗಿ ಮಾಡಲಾಗಿದ್ದು, ಮೊದಲ ಭಾಗ, 'ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ' ಸೆಪ್ಟೆಂಬರ್ 1 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಪ್ರೇಕ್ಷಕರಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಯಿತು. ಬಳಿಕ ಚಿತ್ರವನ್ನು ತೆಲುಗಿನಲ್ಲೂ ಸಪ್ತ ಸಾಗರಾಲು ದಾಟಿ ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆ ಮಾಡಲಾಯಿತು.

ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಯನ್ನು ಪರಂವಃ ಸ್ಟುಡಿಯೋಸ್ ನಿರ್ಮಿಸಿದೆ. ಚಿತ್ರದಲ್ಲಿ ಅಚ್ಯುತ್ ಕುಮಾರ್, ಪವಿತ್ರ ಲೋಕೇಶ್, ಅವಿನಾಶ್, ಶರತ್ ಲೋಹಿತಾಶ್ವ, ರಮೇಶ್ ಇಂದಿರಾ ಮತ್ತು ಗೋಪಾಲ ಕೃಷ್ಣ ದೇಶಪಾಂಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

X
Open in App

Advertisement

X
Kannada Prabha
www.kannadaprabha.com