ಸಾರ್ವಜನಿಕವಾಗಿ ಲಾಂಗ್ ಹಿಡಿದು ದರ್ಶನ್ ಪೋಸ್! ಮತ್ತೆ ವಿವಾದ!
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾರ್ವಜನಿಕವಾಗಿ ಲಾಂಗ್ ಹಿಡಿಯುವ ಮೂಲಕ ಇದೀಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚಿಗೆ ಜಯನಗರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಲಾಂಗ್ ಹಿಡಿದುಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಹೌದು. ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದ ನಟ ದರ್ಶನ್ ಹಾಗೂ ಅಭಿಷೇಕ್ ಅಂಬರೀಶ್ ಅವರನ್ನು ಭರ್ಜರಿಯಾಗಿ ಸನ್ಮಾನಿಸಿದ್ದಾರೆ. ಈ ವೇಳೆ ದರ್ಶನ್ ಮತ್ತು ಅಭಿಗೆ ಬೆಳ್ಳಿ ಕಿರೀಟ, ಲಾಂಗ್ ಉಡುಗೊರೆ ನೀಡಿದ್ದಾರೆ. ದರ್ಶನ್ ಲಾಂಗ್ ಹಿಡಿದು ಪೋಸ್ ಕೊಟ್ಟಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಟರು ಸಾರ್ವಜನಿಕವಾಗಿ ಈ ರೀತಿ ಲಾಂಗ್ ಹಿಡಿದು ಫೋಟೋಗೆ ಪೋಸ್ ನೀಡುವುದು ಸರಿಯಲ್ಲ ಎಂದು ನೆಟ್ಟಿಗರು ಪ್ರತಿಕ್ರಿಯಿಸುತ್ತಿದ್ದಾರೆ. ಈ ಬಗ್ಗೆ ದೂರು ದಾಖಲಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್ ವಿಷಾದ
ಇತ್ತೀಚಿಗೆ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ ಹಿನ್ನೆಲೆಯಲ್ಲಿ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು, ಇದೀಗ ಹೊಸ ಸಮಸ್ಯೆ ಎದುರಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ