Kantara A Legend Chapter-1: ಫಸ್ಟ್ ಲುಕ್, ಟೀಸರ್ ಬಿಡುಗಡೆ, ಕುತೂಹಲ ಸೃಷ್ಟಿಸಿದ ರಿಷಬ್ ಶೆಟ್ಟಿ ರೌದ್ರಾವತಾರ!

ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ʼಕಾಂತಾರʼ ಸಿನಿಮಾದ ಪ್ರೀಕ್ವೆಲ್‌ ಅಂದರೆ ಎರಡನೇ ಭಾಗದ ಫಸ್ಟ್‌ ಲುಕ್‌ ಹಾಗೂ ಟೀಸರ್ ಸೋಮವಾರ ಬಿಡುಗಡೆಯಾಗಿದೆ.
ರೌದ್ರಾವತಾರದಲ್ಲಿ ರಿಷಬ್ ಶೆಟ್ಟಿ.
ರೌದ್ರಾವತಾರದಲ್ಲಿ ರಿಷಬ್ ಶೆಟ್ಟಿ.

ಬೆಂಗಳೂರು: ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ʼಕಾಂತಾರʼ ಸಿನಿಮಾದ ಪ್ರೀಕ್ವೆಲ್‌ ಅಂದರೆ ಎರಡನೇ ಭಾಗದ ಫಸ್ಟ್‌ ಲುಕ್‌ ಹಾಗೂ ಟೀಸರ್ ಸೋಮವಾರ ಬಿಡುಗಡೆಯಾಗಿದೆ.

ಇಂದು ಬೆಳಿಗ್ಗೆ ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ ಸಿನಿಮಾದ ಮೂಹೂರ್ತ ಕಾರ್ಯಕ್ರಮ ನೆರವೇರಿದೆ. ಮುಹೂರ್ತದ ಜೊತೆಗೆ ಫಸ್ಟ್‌ ಲುಕ್‌ ಹಾಗೂ ಟೀಸರ್ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಟೀಸರ್ ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು, ಟೀಸರ್ ನ್ನು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ.

ಯುಟ್ಯೂಬ್‌ನಲ್ಲಿ ಟೀಸರ್ ಬಿಡುಗಡೆಯಾಗಿದ್ದು, ಕಾಂತಾರ ಪ್ರೀಕ್ವೆಲ್‌ ಕತೆ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ ಎಂಬುದು ಬಹಿರಂಗವಾಗಿದೆ. ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್‌ ಅನ್ನು ಹೊಂಬಾಳೆ ಬಣ್ಣಿಸಿದೆ.

ಟೀಸರ್ ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ಇಂದು ಬಿಡುಗಡೆಯಾಗಿದ್ದು, ಫಸ್ಟ್ ಲುಕ್ ನಲ್ಲಿ ರಿಷಬ್ ಶೆಟ್ಟಿಯವರು ರೌದ್ರಾವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಅವತಾರ ಅಭಿಮಾನಿಗಳಲ್ಲಿ ಕುತೂಹಲವನ್ನು ಹೆಚ್ಚುವಂತೆ ಮಾಡಿದೆ.

ಚಿತ್ರದಲ್ಲಿ ರಿಷಬ್‌ ಶೆಟ್ಟಿ ಅವರು ರೌದ್ರವತಾರದಲ್ಲಿ ಅಚ್ಚರಿ ಮೂಡುವಂತೆ ಕಂಡು ಬಂದಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಜಮದಗ್ನಿ ಕೊಡಲಿಯನ್ನು ಹಿಡಿದುಕೊಂಡಿರುವುದು ಕಂಡು ಬಂದಿದ್ದು, ಈ ಪೋಸ್ಟರ್ ಹಲವು ಕುತೂಹಲವನ್ನು ಸೃಷ್ಟಿಸಿದೆ.

‘ಕಾಂತಾರ’ ಚಿತ್ರವನ್ನು ‘ಹೊಂಬಾಳೆ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದರು. ಸಣ್ಣ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ, ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈಗ ‘ಕಾಂತಾರ 2’ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಲು ತಂಡ ನಿರ್ಧರಿಸಿದೆ. ರಿಷಬ್ ಶೆಟ್ಟಿ ಅವರು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com