ಕಾವೇರಿ ನಮ್ಮದು, ಕರ್ನಾಟಕಕ್ಕೆ ನ್ಯಾಯ ಕೊಡಿ: ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್!

ಕಾವೇರಿ ನೀರಿನ ಹೋರಾಟ ಕುರಿತು ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ನಟ ಪ್ರೇಮ್
ನಟ ಪ್ರೇಮ್

ಬೆಂಗಳೂರು: ಕಾವೇರಿ ನೀರಿನ ಹೋರಾಟ ಕುರಿತು ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ರಕ್ತದಲ್ಲಿ ಪತ್ರ ಬರೆಯುತ್ತಿರುವ ವಿಡಿಯೋವೊಂದನ್ನು ಪ್ರೇಮ್ ಹಂಚಿಕೊಂಡಿದ್ದಾರೆ. ಕಾವೇರಿ ನಮ್ಮದು, ಕರ್ನಾಟಕಕ್ಕೆ ದಯವಿಟ್ಟು ನ್ಯಾಯ ಕೊಡಿ ಎಂದು ಅವರು ರಕ್ತದಲ್ಲಿ ಪತ್ರ ಬರೆದಿದ್ದು, ಹಸ್ತದ ಅಚ್ಚನ್ನು ರಕ್ತದಲ್ಲಿ ನಮೂದಿಸಿದ್ದಾರೆ.  

ಸಿದ್ಧ ಕಣೋ ಪ್ರಾಣ ಕೊಡೋಕೆ, ಈ ಜಲ, ನೆಲ ನಾಡು ನುಡಿಗೆ ಎಂದು ಅವರು ಬರೆದುಕೊಂಡಿದ್ದಾರೆ. ಈ ವಿಡಿಯೋಗೆ ಕೆಲ ನೆಟ್ಟಿಗರು  ಮೆಚ್ಚುಗೆ ಸೂಚಿಸುತ್ತಿದ್ದರೆ, ಮತ್ತೆ ಕೆಲವರು ಕಾಲೆಳೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com