'ಸಪ್ತ ಸಾಗರದಾಚೆ ಎಲ್ಲೋ’ ಸೈಡ್​ ಬಿ ಅಧಿಕೃತ ರಿಲೀಸ್​ ಡೇಟ್​ ಫಿಕ್ಸ್!

ಕಳೆದ ಹಲವು ದಿನಗಳಿಂದ ಚಿತ್ರದ ಸೈಡ್​ ಬಿ ರಿಲೀಸ್​ ಡೇಟ್​ನಲ್ಲಿ​ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದು, ಇದೀಗ ಈ ಕುರಿತಂತೆ ಚಿತ್ರತಂಡ ಅಧಿಕೃತ ದಿನಾಂಕವನ್ನು ಘೋಷಿಸಿದೆ.
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಸ್ಟಿಲ್
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಸ್ಟಿಲ್

ಸಿಂಪಲ್ ಸ್ಟಾರ್​, ನಟ ರಕ್ಷಿತ್​ ಶೆಟ್ಟಿ ಮತ್ತು ನಟಿ ರುಕ್ಮಿಣಿ ವಸಂತ್​ ಮುಖ್ಯಭೂಮಿಕೆಯಲ್ಲಿ ನಟಿಸಿದ ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್​ ಎ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು ಸಿನಿಪ್ರಿಯರಿಂದ ವ್ಯಾಪಕ ಮೆಚ್ಚುಗೆ ಗಳಿಸಿತು.

ಕಳೆದ ಹಲವು ದಿನಗಳಿಂದ ಚಿತ್ರದ ಸೈಡ್​ ಬಿ ರಿಲೀಸ್​ ಡೇಟ್​ನಲ್ಲಿ​ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದು, ಇದೀಗ ಈ ಕುರಿತಂತೆ ಚಿತ್ರತಂಡ ಅಧಿಕೃತ ದಿನಾಂಕವನ್ನು ಘೋಷಿಸಿದೆ.

ಪರಮಾವ್ ಪಿಕ್ಚರ್ಸ್ ನಿರ್ಮಾಣದ, ರಕ್ಷಿತ್ ಶೆಟ್ಟಿ - ರುಕ್ಮಿಣಿ ವಸಂತ್ - ಚೈತ್ರಾ ಆಚಾರ್ ಅಭಿನಯದ, ಹೇಮಂತ್ ಎಂ ರಾವ್ ನಿರ್ದೇಶನದ 'ಸಪ್ತ ಸಾಗರದಾಚೆ ಎಲ್ಲೋ - Side B’ ಚಿತ್ರ ಇದೇ ನವೆಂಬರ್ 17ಕ್ಕೆ ಕನ್ನಡ ಸೇರಿದಂತೆ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com