33 ವರ್ಷಗಳ ಬಳಿಕ ಗುರು ಜೊತೆಗೆ ಕೆಲಸ ಮಾಡುತ್ತಿದ್ದೇನೆ, ನನ್ನ ಹೃದಯ ಸಂತೋಷದಿಂದ ಮಿಡಿಯುತ್ತಿದೆ: ಬಿಗ್ ಬಿ ​ ಬಗ್ಗೆ ರಜನಿಕಾಂತ್​ ಗೌರವದ ಮಾತು

ಜೈಲರ್ ಸಿನಿಮಾದ ಯಶಸ್ಸಿನ ಖುಷಿಯಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್, ಇದೀಗ ತಮ್ಮ 170ನೇ ಸಿನಿಮಾದಲ್ಲಿ ನಟಿಸುತ್ತಿದ್ದು, ಇನ್ನೂ ಹೆಸರಿಡದ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದೆ. ಅಮಿತಾಬ್ ಬಚ್ಚನ್ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಅಮಿತಾಬ್ ಬಚ್ಚನ್ ಜೊತೆಗಿರುವ ರಜನಿಕಾಂತ್.
ಅಮಿತಾಬ್ ಬಚ್ಚನ್ ಜೊತೆಗಿರುವ ರಜನಿಕಾಂತ್.

ಜೈಲರ್ ಸಿನಿಮಾದ ಯಶಸ್ಸಿನ ಖುಷಿಯಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್, ಇದೀಗ ತಮ್ಮ 170ನೇ ಸಿನಿಮಾದಲ್ಲಿ ನಟಿಸುತ್ತಿದ್ದು, ಇನ್ನೂ ಹೆಸರಿಡದ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದೆ. ಅಮಿತಾಬ್ ಬಚ್ಚನ್ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಬುಧವಾರ ಸೆಟ್‌ನಲ್ಲಿ ಅಮಿತಾಬ್ ಬಚ್ಚನ್ ಅವರೊಂದಿಗೆ ಇರುವ ಚಿತ್ರವನ್ನು ಹಂಚಿಕೊಂಡಿರುವ ನಟ ರಜನಿಕಾಂತ್, ಬಿಗ್ ಬಿ ಜೊತೆ ಕೆಲಸ ಮಾಡುತ್ತಿದ್ದು, ನನ್ನ ಹೃದಯ ಸಂತೋಷದಿಂದ ಮಿಡಿಯುತ್ತಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, "33 ವರ್ಷಗಳ ನಂತರ, ನಾನು ನನ್ನ ಗುರು, ಅಮಿತಾಬ್ ಬಚ್ಚನ್ ಅವರೊಂದಿಗೆ ಮುಂಬರುವ ಲೈಕಾ ನಿರ್ಮಾಣದ, ಟಿ.ಜೆ ಜ್ಞಾನವೇಲ್ ನಿರ್ದೇಶನದ "ತಲೈವರ್ 170" ಸಿನಿಮಾದಲ್ಲಿ, ಮತ್ತೆ ಕೆಲಸ ಮಾಡುತ್ತಿದ್ದೇನೆ. ನನ್ನ ಹೃದಯವು ಸಂತೋಷದಿಂದ ಮಿಡಿಯುತ್ತಿದೆ ಎಂದು ಹೇಳಿದ್ದಾರೆ.

ರಜನಿಕಾಂತ್ ನಟನೆಯ ಈ 170ನೇ ಸಿನಿಮಾವನ್ನು 'ಜೈ ಭೀಮ್' ಖ್ಯಾತಿಯ ಟಿ ಜೆ ಜ್ಞಾನವೇಲ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಜನಿಕಾಂತ್ ಜೊತೆಗೆ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್‌, ರಿತಿಕಾ ಸಿಂಗ್, ದುಶರಾ ವಿಜಯನ್, ರಕ್ಷನ್, ಜಿ ಎಂ ಸುಂದರ್‌ ಮುಂತಾದವರು ನಟಿಸುತ್ತಿದ್ದಾರೆ. ಅನಿರುದ್ಧ್ ರವಿಚಂದರ್ ಇದರ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಚಿತ್ರದ ಶೂಟಿಂಗ್ ಬಿರುಸಿನಿಂದ ಸಾಗುತ್ತಿದ್ದು, 2024ರ ಜೂನ್‌ನಲ್ಲಿ ಇದನ್ನು ತೆರೆಗೆ ತರುವ ಆಲೋಚನೆ ಚಿತ್ರತಂಡಕ್ಕೆ ಇದೆ. ಈ ಮಧ್ಯೆ 'ಲಿಯೋ' ಖ್ಯಾತಿಯ ಡೈರೆಕ್ಟರ್ ಲೋಕೇಶ್ ಕನಕರಾಜ್ ಜೊತೆಗೆ ರಜನಿಕಾಂತ್ ಸಿನಿಮಾ ಮಾಡಲಿದ್ದು, ಅದನ್ನು 'ಜೈಲರ್' ನಿರ್ಮಾಣ ಮಾಡಿದ್ದ ಸನ್ ಪಿಕ್ಚರ್ಸ್ ನಿರ್ಮಿಸಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com