ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅದ್ದೂರಿ ನಿಶ್ಚಿತಾರ್ಥ
ಕರ್ನಾಟಕ ಮೂಲದ ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ನಟಿ ಐಶ್ವರ್ಯಾ ಸರ್ಜಾ ಚೆನ್ನೈನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮಿಳು ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಜೊತೆ ಐಶ್ವರ್ಯಾ ಎಂಗೇಜ್ ಮೆಂಟ್ ನಡೆದಿದೆ.
ಹಲವು ವರ್ಷಗಳ ಪ್ರೀತಿಗೆ ಐಶ್ವರ್ಯಾ- ಉಮಾಪತಿ ಉಂಗುರದ ಮುದ್ರೆ ಒತ್ತಿದ್ದಾರೆ. ಕುಟುಂಬದ ಸಮ್ಮತಿ ಪಡೆದು ಅದ್ದೂರಿಯಾಗಿ ಈ ಜೋಡಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಅದ್ದೂರಿ ನಿಶ್ಚಿತಾರ್ಥದಲ್ಲಿ ಧ್ರುವ ಸರ್ಜಾ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ. ಡಿಸೆಂಬರ್‌ನಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ ಸೇರಿದಂತೆ ಸರ್ಜಾ ಕುಟುಂಬದ ಸದಸ್ಯರು ಭಾಗಿಯಾಗಿದ್ದರು.
‘ಪ್ರೇಮ ಬರಹ’ ಚಿತ್ರದ ಮೂಲಕ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಪರಿಚಿತರಾದರು. ಬಿಗ್ ಬಾಸ್ ಖ್ಯಾತಿಯ ಚಂದನ್ ಕುಮಾರ್‌ಗೆ ನಾಯಕಿಯಾಗಿ ನಟಿಸಿದ್ದರು. ಮಗಳ ಮೊದಲ ಸಿನಿಮಾಗೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು.
ಐಶ್ವರ್ಯಾ ವಿವಾಹವಾಗಲಿರುವ ಉಮಾಪತಿ ರಾಮಯ್ಯ ಸಹ ಸಿನಿಮಾ ನಟರೇ ಆಗಿದ್ದಾರೆ. 2017ರಲ್ಲಿ ನಾಯಕ ನಟನಾಗಿ ಎಂಟ್ರಿ ಕೊಟ್ಟ ಉಮಾಪತಿ ರಾಮಯ್ಯ, 2021ರ ವರೆಗೆ ನಾಲ್ಕು ಸಿನಿಮಾಗಳಲ್ಲಿ ಮಾತ್ರವೇ ನಟಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ