‘ಸಪ್ತ ಸಾಗರದಾಚೆ ಎಲ್ಲೋ: ಸೈಡ್​ ಬಿ’ ಒಲವೇ ಒಲವೇ ಸಾಂಗ್ ರಿಲೀಸ್!

ಹೇಮಂತ್ ಎಂ ರಾವ್ ನಿರ್ದೇಶನದ ಮತ್ತು ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರಾ ಆಚಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ 'ಸಪ್ತ ಸಾಗರದಾಚೆ ಎಲ್ಲೋ, ಸೈಡ್ ಬಿ' ನಿರ್ಮಾಪಕರು ಮಂಗಳವಾರ ಚಿತ್ರದ ಮೊದಲ ಸಾಂಗ್ ಬಿಡುಗಡೆ ಮಾಡಿದ್ದಾರೆ.
ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ ಫೋಸ್ಟರ್
ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ ಫೋಸ್ಟರ್
Updated on

ಹೇಮಂತ್ ಎಂ ರಾವ್ ನಿರ್ದೇಶನದ ಮತ್ತು ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರಾ ಆಚಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ 'ಸಪ್ತ ಸಾಗರದಾಚೆ ಎಲ್ಲೋ, ಸೈಡ್ ಬಿ' ನಿರ್ಮಾಪಕರು ಮಂಗಳವಾರ ಚಿತ್ರದ ಮೊದಲ ಸಾಂಗ್ ಬಿಡುಗಡೆ ಮಾಡಿದ್ದಾರೆ. 'ಒಲವೇ ಒಲವೇ' ಎಂಬ ಹಾಡಿಗೆ ಎಂ.ಆರ್. ಚರಣ್‌ರಾಜ್  ಸಂಗೀತ ಸಂಯೋಜಿಸಿದ್ದು, ಬಿ ಆರ್ ಸುವರ್ಣ ಶರ್ಮಾ ಸಾಹಿತ್ಯ ಬರೆದಿದ್ದಾರೆ. ಶ್ರೀಲಕ್ಷ್ಮಿ ಬೆಳ್ಮಣ್ಣು ಹಾಡಿದ್ದಾರೆ.

ಈ ಹಾಡನ್ನು ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಬಿಡುಗಡೆ ಮಾಡಲಾಗಿದೆ. ಇದಕ್ಕೆ ತೆಲುಗಿನಲ್ಲಿ ಬಟ್ಟು ವಿಜಯ್ ಕುಮಾರ್, ತಮಿಳಿನಲ್ಲಿ ಮಧುರಕವಿ ಮತ್ತು ಮಲಯಾಳಂನಲ್ಲಿ ಅಖಿಲ್ ಎಂ ಬೋಸ್ ಸಾಹಿತ್ಯ ರಚಿಸಿದ್ದಾರೆ. ಶ್ರೀಲಕ್ಷ್ಮಿ ಬೆಳ್ಮಣ್ಣು ಮೂರು ಭಾಷೆಗಳಲ್ಲಿ ಹಾಡನ್ನು ಹಾಡಿದ್ದಾರೆ.

'ಸಪ್ತ ಸಾಗರದಾಚೆ ಎಲ್ಲೋ' ಎರಡು ಭಾಗಗಳಲ್ಲಿ ತಯಾರಾಗಿದೆ. ಸೆಪ್ಟೆಂಬರ್ 1 ರಂದು ಬಿಡುಗಡೆಯಾದ ಸೈಡ್ ಎ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದು ಐದು ಭಾಷೆಗಳಲ್ಲಿ ಪ್ರೈಮ್ ವೀಡಿಯೊದಲ್ಲಿ ಸ್ಟ್ರೀಮಿಂಗ್ ಮಾಡಲು ಪ್ರಸ್ತುತ ಲಭ್ಯವಿದೆ ಮತ್ತು ವಿವಿಧ ಪ್ರದೇಶಗಳಾದ್ಯಂತ ವೀಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಕಾರಾತ್ಮಕ ಪ್ರತಿಕ್ರಿಯೆಯು ಚಿತ್ರಮಂದಿರಗಳಲ್ಲಿ ಬಹು-ಭಾಷೆಯಲ್ಲಿ ಚಿತ್ರ ಬಿಡುಗಡೆಗೆ ಕಾರಣವಾಗಿದೆ. 

ಸಪ್ತ ಸಾಗರದಾಚೆ ಎಲ್ಲೋ - ಸೈಡ್ ಬಿ, ಪರಂವಾ ಸ್ಟುಡಿಯೋಸ್ ನಿರ್ಮಿಸಿದೆ, ಅಚ್ಯುತ್ ಕುಮಾರ್, ಪವಿತ್ರ ಲೋಕೇಶ್, ಅವಿನಾಶ್, ಶರತ್, ಲೋಹಿತಾಸ್ವ, ರಮೇಶ್ ಇಂದಿರಾ ಮತ್ತು ಗೋಪಾಲ ಕೃಷ್ಣ ದೇಶಪಾಂಡೆ ಪೋಷಕ ಪಾತ್ರಗಳಲ್ಲಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದು, ಅದ್ವೈತ ಗುರುಮೂರ್ತಿ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com