ಚೆನ್ನೈ: ನಟಿ ವಿಜಯಲಕ್ಷ್ಮೀ ನೀಡಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ನಾಮ್ ತಮಿಳರ್ ಕಟ್ಚಿ (ಎನ್ಟಿಕೆ), ನಟ ಮತ್ತು ನಿರ್ದೇಶಕ ಸೀಮನ್ ಅವರನ್ನು ಚೆನ್ನೈ ಪೊಲೀಸರು ಮಂಗಳವಾರ ವಿಚಾರಣೆ ನಡೆಸಲಿದ್ದಾರೆ.
ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ತನಗೆ ಮೋಸ ಮಾಡಿದ್ದಾನೆ ಎಂದು ಚೆನ್ನೈ ನಗರ ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮೀ ದೂರು ನೀಡಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗುವಂತೆ ಸೀಮನ್ ಅವರಿಗೆ ಸೂಚಿಸಲಾಗಿದ್ದರೂ, ಕಾರಣಾಂತರಗಳಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.
ಸೀಮಾನ್ ನನ್ನನ್ನು ಮದುವೆ ಆಗುವುದಾಗಿ ನಂಬಿಸಿದ್ದ, ಪ್ರೀತಿಸುತ್ತಿರುವಂತೆ ನಾಟಕ ಆಡಿ ನನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ. ಬಲವಂತವಾಗಿ 7 ಬಾರಿ ಗರ್ಭಪಾತ ಮಾಡಿಸಿದ್ಧಾನೆ ಎಂದು ವಿಜಯಲಕ್ಷ್ಮೀ ದೂರು ನೀಡಿದ್ದಾರೆ.
ವಂಚನೆ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ ನಿಷೇಧ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸೀಮನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿಜಯಲಕ್ಷ್ಮಿ ಕೂಡ ಇತ್ತೀಚೆಗೆ ತಿರುವಳ್ಳೂರಿನಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದರು.
ಚೆನ್ನೈ ಪೊಲೀಸರು ವಿಜಯಲಕ್ಷ್ಮೀ ನೀಡಿದ ದೂರಿನ ಆಧಾರದ ಮೇರೆಗೆ ತನಿಖೆ ಆರಂಭಿಸಿದ್ದಾರೆ. ಸೀಮನ್ ವಿಚಾರಣೆಗೆ ಸೂಚಿಸಿರುವುದಲ್ಲದೆ ವಿಜಯಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ತಮಗೆ 7 ಬಾರಿ ಗರ್ಭಪಾತವಾಗಿದೆ ಎಂದು ವಿಜಯಲಕ್ಷ್ಮೀ ಅರೋಪಿಸಿರುವುದರಿಂದ ಶನಿವಾರ 4 ಮಂದಿ ಸ್ತ್ರೀ ರೋಗ ತಜ್ಞರು ವಿಜಯಲಕ್ಷ್ಮೀ ಗರ್ಭಕೋಶಕ್ಕೆ ಅಲ್ಟ್ರಾಸೌಂಡ್ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ತನಿಖೆ ಮುಂದುವರಿದಿದ್ದು, ಸೀಮನ್ ಹೇಳಿಕೆ ಪಡೆಯಲಿದ್ದಾರೆ.
Advertisement