ವಿನೋದ್ ಪ್ರಭಾಕರ್ ಅಭಿನಯದ 'ಫೈಟರ್' ಅಕ್ಟೋಬರ್‌ನಲ್ಲಿ ರಿಲೀಸ್!

ಸ್ಯಾಂಡಲ್ವುಡ್ ನಟ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ ‘ಫೈಟರ್’ ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.
ಪೈಟರ್ ಸಿನಿಮಾ ಸ್ಟಿಲ್
ಪೈಟರ್ ಸಿನಿಮಾ ಸ್ಟಿಲ್

ಸ್ಯಾಂಡಲ್ವುಡ್ ನಟ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ ‘ಫೈಟರ್’ ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.

ಸಂಗೀತ ನಿರ್ದೇಶಕ ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಗುರುರಂಜನ್ ಶೆಟ್ಟಿ (ನಟಿ ಅನುಷ್ಕಾ ಶೆಟ್ಟಿ ಸಹೋದರ), ನಾಗರಾಜ್, ಕೃಷ್ಣಪ್ಪ, ಗೌರೀಶ್ ಹಾಗೂ ಹಿರಿಯ ಪತ್ರಕರ್ತ ಕೆ.ಎಸ್ ವಾಸು, ಕೆ.ಎನ್ ನಾಗೇಶ್ ಕುಮಾರ್ ಮುಂತಾದ ಗಣ್ಯರು ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಈ ಹಾಡಿನ ಮೊದಲ ಪದ "ಐ ವಾನ ಫಾಲೋ" ಎಂಬುದನ್ನು ನಿರ್ದೇಶಕರು ಹೇಳಿದಾಗ "ಫಾಲೋ" ಎಂಬ ಪದದಿಂದಲೇ ಈ ಹಾಡು ಆರಂಭವಾಯಿತು. ವಿಶೇಷವೆಂದರೆ, ಈ  ಹಾಡಿನಲ್ಲಿ ಬರುವ ಪದಗಳಿಗೆ ಎರಡು ಅರ್ಥಗಳಿದೆ. ಕವಿರಾಜ್ ಅದ್ಭುತವಾಗಿ ಹಾಡು ಬರೆದಿದ್ದಾರೆ. ಚೈತ್ರ ಸೊಗಸಾಗಿ ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಗುರುಕಿರಣ್ ಹಾಡಿನ ಬಗ್ಗೆ ಮಾಹಿತಿ ನೀಡಿದರು.

ಈ ಹಾಡನ್ನು ಪಾಂಡಿಚೇರಿಯಲ್ಲಿ ಚಿತ್ರಿಸಲಾಗಿದೆ. ಗುರುಕಿರಣ್ ಅವರ ಸಂಗೀತ, ಕವಿರಾಜ್ ಅವರ ಸಾಹಿತ್ಯ, ಮೋಹನ್  ನೃತ್ಯ ನಿರ್ದೇಶನ ಹಾಗೂ ವಿನೋದ್ ಪ್ರಭಾಕರ್, ಲೇಖಾ ಚಂದ್ರ ಅವರ ಅಭಿನಯ ಎಲ್ಲವೂ ಸೇರಿ ಈ "ಫಾಲೋ ಯು" ಹಾಡು ಅದ್ಭುತವಾಗಿ ಹಾಗೂ ಅದ್ದೂರಿಯಾಗಿ ಮೂಡಿಬಂದಿದೆ. ಈ ಹಾಡನ್ನು ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ.

ಇದೊಂದು ಕೌಟುಂಬಿಕ ಮನರಂಜನಾ ಚಿತ್ರ. ಒಗ್ಗಟ್ಟು ಮತ್ತು ಶಿಸ್ತಿನ ಮೂಲಕ ಏನನ್ನಾದರೂ ಸಾಧಿಸಬಹುದು ಎಂಬ ಸಂದೇಶವನ್ನು ನಾವು ನೀಡಿದ್ದೇವೆ. ಅದರೊಂದಿಗೆ ಬಲವಾದ ಭಾವನಾತ್ಮಕ ಅಂಶವೂ ಇದೆ ಎಂದು ವಿನೋದ್ ಪ್ರಭಾಕರ್ ಹೇಳಿದ್ದಾರೆ.

ಈ ಚಿತ್ರವನ್ನು ಸೋಮಶೇಖರ್ ಕಟ್ಟಿಗೇನಹಳ್ಳಿ ಅವರ ಆಕಾಶ್ ಎಂಟರ್‌ಪ್ರೈಸಸ್ ಬ್ಯಾನರ್‌ನಿಂದ ನಿರ್ಮಿಸಲಾಗಿದೆ . ಪಾವನಾ ಮತ್ತು ಲೇಖಾ ಚಂದ್ರ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಶರತ್ ಲೋಹಿತಾಶ್ವ, ನಿರೋಷಾ ಮತ್ತು ಪ್ರತಾಪ್ ಕುರಿ ಮುಂತಾದವರು ನಟಿಸಿದ್ದಾರೆ. ಚಿತ್ರವು ಪ್ರಸ್ತುತ ಪೋಸ್ಟ್-ಪ್ರೊಡಕ್ಷನ್ ಕೆಲಸಗಳ ಅಂತಿಮ ಹಂತದಲ್ಲಿದ್ದು, ತಯಾರಕರು ಅಕ್ಟೋಬರ್ ನಲ್ಲಿ ಬಿಡುಗಡೆ ಮಾಡುವ ಉದ್ದೇಶ ಹೊಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com