'ಕಡಲ ತೀರದ ಭಾರ್ಗವ' ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದ ಪನ್ನಗ ಸೋಮಶೇಖರ್ ಅವರು ಇದೀಗ ತಮ್ಮ ಎರಡನೇ ಸಿನಿಮಾದ ನಿರ್ದೇಶನಕ್ಕೆ ಸಿದ್ಧರಾಗಿದ್ದಾರೆ. ಚಿತ್ರಕ್ಕೆ 'ಕೆಂದಾವರೆ' ಎಂಬ ಶೀರ್ಷಿಕೆಯನ್ನು ಇಡಲಾಗಿದ್ದು, ಶೀರ್ಷಿಕೆಯನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಿಡುಗಡೆ ಮಾಡಿದ್ದಾರೆ.
ಈ ಹಿಂದೆ ಮ್ಯೂಸಿಕ್ ಆಲ್ಬಂನಲ್ಲಿ ಕಾಣಿಸಿಕೊಂಡಿದ್ದ ಆದಿತ್ಯ ವಿನೋದ್ ನಾಯಕ್ ಅವರು ಚಿತ್ರದಲ್ಲಿ ನಾಯಕನಾಗಿ ಸ್ಯಾಂಡಲ್‌ವುಡ್ ಪ್ರವೇಶಿಸುತ್ತಿದ್ದಾರೆ. ನೈಜ ಘಟನೆಯನ್ನು ಆಧರಿಸಿದ ಚಿತ್ರವನ್ನು ಅಪ್ರಮೇಯ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ. ಚಿತ್ರಕ್ಕೆ ಹಿತಾಂಶು ಸಂಗೀತ ನೀಡಿದರೆ, ಕೀರ್ತನ್ ಪೂಜಾರಿ ಛಾಯಾಗ್ರಹಣವನ್ನು ನಿರ್ವಹಿಸುತ್ತಿದ್ದಾರೆ.
ಸದ್ಯ ಪ್ರಿ-ಪ್ರೊಡಕ್ಷನ್‌ನಲ್ಲಿ ನಿರತರಾಗಿರುವ ಚಿತ್ರತಂಡ, ನವೆಂಬರ್‌ನಲ್ಲಿ ಹುಬ್ಬಳ್ಳಿ, ಕಾರವಾರ ಮತ್ತು ಸಾಗರದಂತಹ ಕರ್ನಾಟಕದ ಇತರ ಸ್ಥಳಗಳಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ಯೋಜಿಸಿದ್ದಾರೆ.
Advertisement