'ಮರೀಚಿ' ಫೈನಲ್ ಮಾಡುವುದಕ್ಕೂ ಮುನ್ನ 150 ಟೈಟಲ್ ಸೆಲೆಕ್ಟ್ ಮಾಡಿದ್ದೆವು: ನಿರ್ದೇಶಕ ಸಿಧ್ರುವ್

ನಿರ್ದೇಶಕ ಸಿಧ್ರುವ್ ವರ ಚೊಚ್ಚಲ ಚಿತ್ರ ಮರೀಚಿ ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರವು ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದ್ದು, ಚಿತ್ರತಂಡ ಇತ್ತೀಚೆಗೆ ಟೀಸರ್ ಅನ್ನು ಬಿಡುಗಡೆ ಮಾಡಿತು.
ಮರೀಚಿ ಚಿತ್ರದ ಸ್ಟಿಲ್.
ಮರೀಚಿ ಚಿತ್ರದ ಸ್ಟಿಲ್.

ನಿರ್ದೇಶಕ ಸಿಧ್ರುವ್ ವರ ಚೊಚ್ಚಲ ಚಿತ್ರ ಮರೀಚಿ ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರವು ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದ್ದು, ಚಿತ್ರತಂಡ ಇತ್ತೀಚೆಗೆ ಟೀಸರ್ ಅನ್ನು ಬಿಡುಗಡೆ ಮಾಡಿತು.

ಸಸ್ಪೆನ್ಸ್ ಥ್ರಿಲ್ಲಿರ್‌ ಕಥಾಹಂದರದ ಈ ಸಿನಿಮಾದಲ್ಲಿ ಪೊಲೀಸ್‌ ಅಧಿಕಾರಿಯಾಗಿ ವಿಜಯ ರಾಘವೇಂದ್ರ ಕಾಣಿಸಿಕೊಂಡಿದ್ದು, ನಟಿ ಸೋನು ಗೌಡ ಅವರು ವಿಜಯ ರಾಘವೇಂದ್ರ ಅವರಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.

ಸಿಧ್ರುವ್ (ಸಿದ್ದು) ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದು, ಸಂತೋಷ್‌ ಮಾಯಪ್ಪ ಅವರ ಜೊತೆಗೂಡಿ ನಿರ್ಮಾಣ ಮಾಡಿದ್ದಾರೆ. ಸಿಧ್ರುವ್'ಗೆ ಇದು ಚೊಚ್ಚಲ ಸಿನಿಮಾ. ‘ಋಷಿಯೊಬ್ಬರ ಹೆಸರು ಶೀರ್ಷಿಕೆಯಾಗಿ ಆಯ್ಕೆ ಮಾಡಬೇಕಿತ್ತು. ಅದಕ್ಕೆ ‘ಮರೀಚಿ’ ಆಯ್ಕೆ ಮಾಡಿದ್ದೇನೆ. ಮರೀಚಿ ಎಂದರೆ ಬ್ರಹ್ಮನ ಮಗ. ಒಂದೊಳ್ಳೆ ಪ್ರಯತ್ನ ಮಾಡಿದ್ದೇವೆಂದು ಸಿಧ್ರುವ್ ಹೇಳಿದ್ದಾರೆ.

ಮರೀಚಿ ಅನ್ನೋದು ಬ್ರಹ್ಮ ದೇವನ ಮಗನ ಹೆಸರಾಗಿದೆ. ಗುಡ್ ಮತ್ತು ಬ್ಯಾಡ್ ಹೀಗೆ ಎರಡಕ್ಕೂ ಮರೀಚಿ ಇರ್ತಾನೆ ಅನ್ನುವ ನಂಬಿಕೆ ಕೂಡ ಇದೆ. ಆದರೆ ಈ ಒಂದು ಟೈಟಲ್ ಇಡೋ ಮೊದಲು ನಿರ್ದೇಶಕ ಸಿಧ್ರುವ್ ಹೆಚ್ಚು ಕಡಿಮೆ 150 ಟೈಟಲ್ ಸೆಲೆಕ್ಟ್ ಮಾಡಿದ್ದಾರೆ. ಕೊನೆಗೆ "ಋಷಿ" ಅನ್ನೋ ಟೈಟಲ್ ಇಡ್ಬೇಕು ಅಂತಲೇ ಫೈನಲ್ ಮಾಡಿದ್ದರು. ಅಷ್ಟರಲ್ಲಿಯೇ ಟಾಲಿವುಡ್‌ನಲ್ಲಿ ಋಷಿ ಹೆಸರಿನ ಸಿನಿಮಾ ಬರುವ ವಿಷಯ ತಿಳಿದಿತ್ತು. ಹಾಗಾಗಿಯೇ ಈ ಚಿತ್ರಕ್ಕೆ ಮರೀಚಿ ಎಂಜು ಟೈಟಲ್ ಅಂತಿಮಗೊಳಿಸಲಾಗಿತ್ತು ಎಂದರು.

ಟ್ಯಾಗ್ ಲೈನ್ ಹೇಳುವಂತೆ ಗಾಡ್ ಫಾದರ್ ಆಫ್ ಗುಡ್ ಆ್ಯಂಡ್ ಬ್ಯಾಡ್ ಎನ್ನುವ ಹಾಗೆ ಪ್ರತಿಯೊಬ್ಬರ ಮನಸ್ಸಿನಲ್ಲಿ ಕಥೆ ಎಣೆಯುವ ಮನಸ್ಸು ಇರುತ್ತದೆ. ನಮ್ಮಗೂ ಅದೇ ಬೇಕಿರುವುದು. ಮರೀಚಿ ಸಿನಿಮಾ ಒಂದು ಕ್ರೈಮ್ ಥ್ರಿಲ್ಲರ್. ಟೀಸರ್ ನೋಡಿದರೆ ಅದು ಗೊತ್ತಾಗುತ್ತದೆ. ಈ ಚಿತ್ರದಲ್ಲಿ ಪೊಲೀಸ್ ಪಾತ್ರ ಮಾಡುವ ಅವಕಾಶವನ್ನು ನಿರ್ದೇಶಕರು ಕೊಟ್ಟಿದ್ದಾರೆ. ಮರೀಚಿ ಸಿನಿಮಾದಲ್ಲಿ ತಾಂತ್ರಿಕ ವರ್ಗದವರನ್ನು ಎಷ್ಟು ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದರೋ ಅದೇ ರೀತಿ ತೆರೆಮೇಲೆ ಬರುವ ಕಲಾವಿದರನ್ನು ಅಷ್ಟೇ ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದಾರೆ. ಅದರಲ್ಲಿ ನಾನು ಒಬ್ಬ ಇದ್ದೇನೆ ಎಂದು ಹೇಳಲು ಖುಷಿಯಾಗುತ್ತದೆ ವಿಜಯ್ ರಾಘವೇಂದ್ರ ಅವರು ಹೇಳಿದ್ದಾರೆ.

ಮರೀಚಿ ಸ್ಟೋರಿ ಲೈನ್ ನನಗೆ ಬಹಳ ಇಷ್ಟವಾಯಿತು. ಈ ಚಿತ್ರದಲ್ಲಿ ಫಾರ್ಪಮೆನ್ಸ್ ಗೆ ತುಂಬಾ ಸ್ಕೋಪ್ ಇತ್ತು. ನನ್ನ ಪಾತ್ರ ತುಂಬಾ ಚೆನ್ನಾಗಿ ಬಂದಿದೆ. ಹ್ಯಾಪಿ ನ್ಯೂ ಇಯರ್ ನಲ್ಲಿ ಗಂಡ ಹೆಂಡತಿಯಾಗಿ ನಾನು ವಿಜಯ್ ಸರ್ ನಟಿಸಿದ್ದೇವು. ಇಲ್ಲಿಯೂ ಗಂಡ ಹೆಂಡತಿಯಾಗಿ ನಟಿಸಿದ್ದೇವೆ. ಎಮೋಷನಲ್ ಆಗಿ ಮರೀಚಿ ಸಿನಿಮಾ ಮೂಡಿಬಂದಿದೆ. ಸ್ಕ್ರೀನ್ ನಲ್ಲಿ ನಾವು ಹೇಗೆ ಕಾಣಿಸುತ್ತೇವೆ ಎಂಬುದನ್ನು ನೋಡಲು ನಾನು ಕೂಡ ಕಾತುರಳಾಗಿದ್ದೇನೆ ಎಂದರು.

ಮರೀಚಿ ಲವ್  ಸ್ಟೋರಿ ಒಳಗೊಂಡಂತೆ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ. ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿ, ಒಂದಿಷ್ಟು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ಸಿದ್ಧ್ರುವ್ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಕಥೆ, ಚಿತ್ರಕಥೆ ಕೂಡ ಇವರೇ ಬರೆದಿದ್ದಾರೆ.

ಚಿತ್ರದಲ್ಲಿ ವಿಜಯ ರಾಘವೇಂದ್ರ ಜೋಡಿಯಾಗಿ ನಟಿ ಸೋನು ಗೌಡ ನಟಿಸಿದ್ದು. ಅಭಿ ದಾಸ್, ಸ್ಪಂದನ ಸೋಮಣ್ಣ, ಆರ್ಯನ್, ಶೃತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣ ಬಾಲರಾಜ್ ಚಿತ್ರದ ತಾರಾಬಳಗದಲ್ಲಿದ್ದಾರೆ.

ಮನೋಹರ್ ಜೋಶಿ ಛಾಯಾಗ್ರಹಣ, ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ ಚಿತ್ರಕ್ಕಿರಲಿದೆ. ಎಸ್ ಎಸ್ ರೆಕ್ ಬ್ಯಾನರ್ ನಡಿ ನಿರ್ದೇಶಕ ಸಿಧ್ರುವ್ ಹಾಗೂ ಸಂತೋಷ್ ಮಾಯಪ್ಪ ಚಿತ್ರವನ್ನು ನಿರ್ಮಿಸಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಸಿನಿಮಾವನ್ನು ನವೆಂಬರ್ ತಿಂಗಳಿನಲ್ಲಿ ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com