
ಪ್ರಕಾಶ್ ರಾಜ್, ಕಿಚ್ಚ ಸುದೀಪ್
ಕನ್ನಡದ ಸ್ಟಾರ್ ನಟ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನಿರ್ಧಾರದ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ.
ಸುದೀಪ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಯಾದಾಗಿನಿಂದಲೂ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿರುವ ಪ್ರಕಾಶ್ ರಾಜ್, ಈಗ ಸುದೀಪ್... ಇನ್ನು ಮುಂದೆ ನಿಮ್ಮನ್ನೂ... ನಿಮ್ಮ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ ಎಂದು ತಾಕೀತು ಮಾಡಿದ್ದಾರೆ.
ಸುದೀಪ್.. ಒಬ್ಬ ಮೇರು ಕಲಾವಿದನಾಗಿ ಸಮಾಜದ ಎಲ್ಲ ವರ್ಗದ ಪ್ರೀತಿಯಿಂದ ಬೆಳೆದ ನೀವು, ಜನ ಸಾಮಾನ್ಯನ ದನಿಯಾಗುವಿರಿ ಎಂದು ಆಶಿಸಿದ್ದೆ. ಆದರೆ ತಾವು ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಕಿಚ್ಚ ಸುದೀಪ್ ಹೇಳಿಕೆಯಿಂದ ನನಗೆ ಆಘಾತ ಮತ್ತು ನೋವಾಗಿದೆ: ನಟ ಪ್ರಕಾಶ್ ರಾಜ್
ಸುದೀಪ್.. ಒಬ್ಬ ಮೇರು ಕಲಾವಿದನಾಗಿ ಸಮಾಜದ ಎಲ್ಲ ವರ್ಗದ ಪ್ರೀತಿಯಿಂದ ಬೆಳೆದ ನೀವು ,ಜನ ಸಾಮಾನ್ಯನ ದನಿಯಾಗುವಿರಿ ಎಂದು ಆಶಿಸಿದ್ದೆ.ಆದರೆ ತಾವು ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲ್ಲ ..ಇನ್ನು ಮುಂದೆ ನಿಮ್ಮನ್ನೂ .. ನಿಮ್ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ ..@KicchaSudeep #justasking
— Prakash Raj (@prakashraaj) April 6, 2023
ಇದಕ್ಕೂ ಮುನ್ನಾ ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂಬ ತಮ್ಮ ಟ್ವೀಟ್ ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ಸುದೀಪ್ ನೀಡಿರುವ ಹೇಳಿಕೆಯಿಂದ ನನಗೆ ಆಘಾತ ಮತ್ತು ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.