ತೆಲುಗಿನ ಪ್ರಸಿದ್ಧ ನಿರ್ಮಾಪಕ ದಿಲ್ ರಾಜು ಜೊತೆ ನಟ ಯಶ್ ಮುಂದಿನ ಚಿತ್ರ

ಕನ್ನಡದ ಸ್ಟಾರ್‌ ನಟ ಯಶ್ ‘ಕೆಜಿಎಫ್ 2’ ತೆರೆಕಂಡ ಬಳಿಕ ಅವರು ದೊಡ್ಡ ಬ್ರೇಕ್ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಯಶ್‌ ತೆಲುಗಿನ ದಿಲ್ ರಾಜು ಬ್ಯಾನರ್‌ ಅಡಿಯಲ್ಲಿ ನಟಿಸುತ್ತಿದ್ದಾರೆ.
ಯಶ್
ಯಶ್

ಹೈದರಾಬಾದ್‌: ಕನ್ನಡದ ಸ್ಟಾರ್‌ ನಟ ಯಶ್ ‘ಕೆಜಿಎಫ್ 2’ ತೆರೆಕಂಡ ಬಳಿಕ ಅವರು ದೊಡ್ಡ ಬ್ರೇಕ್ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಯಶ್‌ ತೆಲುಗಿನ ದಿಲ್ ರಾಜು ಬ್ಯಾನರ್‌ ಅಡಿಯಲ್ಲಿ ನಟಿಸುತ್ತಿದ್ದಾರೆ.

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಮೂಲಕ ದಿಲ್‌ ರಾಜು ಬಿಗ್‌ ಬಜೆಟ್‌ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ದಳಪತಿ ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿ ಗಳಿಕೆ ಮಾಡಿತು.

ಯಶ್ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.ಯಶ್‌ ಜೊತೆ ದಿಲ್‌ ರಾಜು ಸಿನಿಮಾ ಮಾಡುವುದು ಖಚಿತವಾಗಿದೆ. ಆದರೆ ಯಶ್‌ ಅವರ 19ನೇ ಅಥವಾ 20ನೇ ಸಿನಿಮಾವೇ? ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಯಶ್ ಅವರ 19ನೇ ಚಿತ್ರಕ್ಕೆ ದಿಲ್ ರಾಜು ಬಂಡವಾಳ ಹಾಕುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇತ್ತೀಚೆಗೆ ಟ್ವಿಟರ್​ನಲ್ಲಿ ಆಸ್ಕ್ ಮಿ ಎನಿಥಿಂಗ್ ಸೆಷನ್ ನಡೆಸಲಾಯಿತು. ಈ ವೇಳೆ ಯಶ್ ಅಭಿಮಾನಿಯೊಬ್ಬರು ‘ಯಶ್ ಜೊತೆ ಸಿನಿಮಾ ನಿರೀಕ್ಷಿಸಬಹುದೇ’ ಎಂದು ದಿಲ್​ ರಾಜುಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ದಿಲ್ ರಾಜು ಪರವಾಗಿ ಉತ್ತರಿಸಿರುವ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಸಂಸ್ಥೆ ‘ಹೌದು’ ಎನ್ನುವ ಉತ್ತರ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com