
ಕಂಠೀರವ ಸ್ಟುಡಿಯೊದಲ್ಲಿರುವ ಡಾ ರಾಜ್ ಕುಮಾರ್ ಸಮಾಧಿ ಮುಂದೆ ಪುತ್ರ ರಾಘವೇಂದ್ರ ರಾಜ್ ಕುಮಾರ್
ಬೆಂಗಳೂರು: ಕನ್ನಡದ ವರನಟ, ನಟ ಸಾರ್ವಭೌಮ, ಪದ್ಮಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಡಾ ರಾಜ್ ಕುಮಾರ್ ಅವರ 94ನೇ ಜಯಂತಿ.
ಏಪ್ರಿಲ್ 24, 1929ರಲ್ಲಿ ಗಾಜನೂರಿನಲ್ಲಿ ಜನಿಸಿದ ಡಾ ರಾಜ್ ಕುಮಾರ್ ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕಗಳ ಚಿತ್ರರಂಗದ ಬದುಕಿನಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಅತ್ಯಂತ ಪ್ರಸಿದ್ಧ ಭಾರತೀಯ ಚಿತ್ರನಟ.
ಇಂದು ಅವರ ಜನ್ಮದಿನವನ್ನು ನಾಡಿನಾದ್ಯಂತ ಅಭಿಮಾನಿಗಳು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್ ಕುಮಾರ್ ಸ್ಮಾರಕಕ್ಕೆ ಬೆಳಗ್ಗೆಯಿಂದ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ಡಾ ರಾಜ್ ಕುಟುಂಬ ಸದಸ್ಯರು ಬೆಳಗ್ಗೆಯೇ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ರಾಜ್ ಕುಮಾರ್ ಹುಟ್ಟುಹಬ್ಬದ ಹಿನ್ನೆಲೆ ಅವರ ಅಭಿಮಾನಿಗಳು ಕೂಡ ನಾನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಮಾಜಮುಖಿ ಕೆಲಸಗಳಲ್ಲಿ ತೊಡಗಿದ್ದಾರೆ.
