ಕನ್ನಡ ನಟ-ನಿರ್ದೇಶಕ 'ಟಪೋರಿ ಸತ್ಯ' ಅನಾರೋಗ್ಯದಿಂದ ನಿಧನ
ಸ್ಯಾಂಡಲ್ ವುಡ್ ನಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ, ಸಿನಿಮಾ ನಿರ್ದೇಶಕನಾಗಿಯೂ ಗುರುತಿಸಿಕೊಂಡಿದ್ದ ಟಪೋರಿ ಸತ್ಯ (46) ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
Published: 24th April 2023 11:39 AM | Last Updated: 24th April 2023 11:40 AM | A+A A-

ಟಪೋರಿ ಸತ್ಯ
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ, ಸಿನಿಮಾ ನಿರ್ದೇಶಕನಾಗಿಯೂ ಗುರುತಿಸಿಕೊಂಡಿದ್ದ ಟಪೋರಿ ಸತ್ಯ (46) ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಟಪೋರಿ ಸತ್ಯ, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಲೂಸ್ ಮಾಸ ಯೋಗಿ ಅಭಿನಯದ ʼನಂದ ಲವ್ಸ್ ನಂದಿತಾʼ ಚಿತ್ರದಲ್ಲಿ ʼಕ್ವಾಟ್ರುʼ ಎಂಬ ಪಾತ್ರದಲ್ಲಿ ನಟಿಸಿ ಅವರು ಗಮನ ಸೆಳೆದಿದ್ದರು.
30 ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ಚಂದನವನದಲ್ಲಿ ಕಲಾವಿದನಾಗಿ ಗುರುತಿಸಿಕೊಂಡಿದ್ದ ಅವರು ʼಮೇಳʼ ಎಂಬ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಇನ್ನೇನು ಹೊಸ ಚಿತ್ರ ಮಾಡುವ ತಯಾರಿಯಲ್ಲಿದ್ದ ಅವರು ಇದಕ್ಕಾಗಿ ಅಡಿಷನ್ ನಡೆಸುತ್ತಿದ್ದರು. ಪತ್ನಿ ಮತ್ತು ಮಕ್ಕಳನ್ನು ಸತ್ಯ ಅಗಲಿದ್ದಾರೆ. ಅವರ ಹಠಾತ್ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.