ಕಿಚ್ಚ ಸುದೀಪ್
ಸಿನಿಮಾ ಸುದ್ದಿ
ಕಿಚ್ಚನ ಹೊಸ ಚಿತ್ರ ಅನೌನ್ಸ್: ಮಾಹಿತಿ ಹಂಚಿಕೊಂಡ ನಟ
ವಿಕ್ರಾಂತ್ ರೋಣದಲ್ಲಿ ನಾಯಕರಾಗಿ ಕಾಣಿಸಿಕೊಂಡ ನಂತರ ಕಿಚ್ಚ ಸುದೀಪ್ ಕೆಲ ಸಮಯ ನಟನೆಯಿಂದ ದೂರ ಉಳಿದಿದ್ದರು. ಇತ್ತೀಚೆಗೆ ಮೂರು ಚಿತ್ರಗಳನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದರು. ಈ ಮಧ್ಯೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ.

ಇದೀಗ ತಮ್ಮ ಹೊಸ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ. ಮೇ 22ರಂದು ಮೊದಲ ಸಿನಿಮಾದ ಪ್ರೊಮೋ (Promo) ಶೂಟ್ ಹಾಗೂ ಜೂನ್ 1 ರಂದು ಆ ಸಿನಿಮಾವನ್ನು ಲಾಂಚ್ ಮಾಡುವುದಾಗಿ ಬರೆದುಕೊಂಡಿದ್ದಾರೆ. ಚಿತ್ರದ ಸ್ಕ್ರಿಪ್ಟ್ ಬಹಳ ಚೆನ್ನಾಗಿದ್ದು ಅಭಿನಯಿಸಲು ಕಾತರನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಸದ್ಯ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರು ಸೂಚಿಸಿರುವ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದು, ಹೋದಲ್ಲೆಲ್ಲಾ ಅಪಾರ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ