ಲಾಲ್ಬಾಗ್ ಸಿಬ್ಬಂದಿಗೆ ಗುದ್ದಿದ ರಚಿತಾ ರಾಮ್ ಕಾರು: ಕಾರ್ಮಿಕನನ್ನು ಮಾತನಾಡಿಸುವ ಸೌಜನ್ಯ ತೋರದ ನಟಿ!
ರಚಿತಾ ಪ್ರಯಾಣಿಸುತ್ತಿದ್ದ ಕಾರು ಸ್ವಚ್ಛತಾ ಕಾರ್ಮಿಕನಿಗೆ ಗುದ್ದಿದೆ. ಜಸ್ಟ್ ಮಿಸ್ ಎನ್ನುವಂತೆ ಕಾರ್ಮಿಕ ಪಕ್ಕಕ್ಕೆ ಹಾರಿ ಅಪಘಾತದಿಂದ ತಪ್ಪಿಸಿಕೊಂಡಿದ್ದಾನೆ. ಈ ಘಟನೆ ನಡೆದಾಗ ರಚಿತಾ ರಾಮ್ ಕಾರಲ್ಲಿ ಇದ್ದರೂ, ಏನೂ ಆಗಿಯೇ ಇಲ್ಲ ಎನ್ನುವಂತೆ ಪ್ಲವರ್ ಶೋನತ್ತ ತೆರಳಿದ್ದಾರೆ.
Published: 14th August 2023 02:08 PM | Last Updated: 14th August 2023 02:30 PM | A+A A-

ರಚಿತಾ ರಾಮ್
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಬೆಂಗಳೂರಿನ ಲಾಲ್ ಬಾಗ್ ಫ್ಲವರ್ ಶೋ ನಡೆಯುತ್ತಿದ್ದು, ಅತಿಥಿಯಾಗಿ ಪಾಲ್ಗೊಳ್ಳುವುದಕ್ಕಾಗಿ ನಟಿ ರಚಿತಾ ರಾಮ್ ಇಂದು ಲಾಲ್ ಬಾಗ್ ಗೆ ಆಗಮಿಸಿದ್ದರು.
ಈ ಸಂದರ್ಭದಲ್ಲಿ ರಚಿತಾ ಪ್ರಯಾಣಿಸುತ್ತಿದ್ದ ಕಾರು ಸ್ವಚ್ಛತಾ ಕಾರ್ಮಿಕನಿಗೆ ಗುದ್ದಿದೆ. ಜಸ್ಟ್ ಮಿಸ್ ಎನ್ನುವಂತೆ ಕಾರ್ಮಿಕ ಪಕ್ಕಕ್ಕೆ ಹಾರಿ ಅಪಘಾತದಿಂದ ತಪ್ಪಿಸಿಕೊಂಡಿದ್ದಾನೆ. ಈ ಘಟನೆ ನಡೆದಾಗ ರಚಿತಾ ರಾಮ್ ಕಾರಲ್ಲಿ ಇದ್ದರೂ, ಏನೂ ಆಗಿಯೇ ಇಲ್ಲ ಎನ್ನುವಂತೆ ಪ್ಲವರ್ ಶೋನತ್ತ ತೆರಳಿದ್ದಾರೆ. ಕಾರು ನಿಲ್ಲಿಸದೇ ಕ್ಷಮೆಯಾಚನೆಯೂ ಮಾಡದೇ ಹೊರಟ ರಚಿತಾ ಹಾಗೂ ಡ್ರೈವರ್ ನಡೆಗೆ ಅಲ್ಲಿದ್ದವರು ಬೇಸರ ವ್ಯಕ್ತಪಡಿಸಿದ್ದಾರೆ.
ಆಕಸ್ಮಿಕ ಎನ್ನುವಂತೆ ಘಟನೆ ನಡೆದಿದ್ದರೂ, ರಚಿತಾ ರಾಮ್ ಕನಿಷ್ಠ ಮಾನವೀಯತೆ ದೃಷ್ಟಿಯಿಂದಾರೂ ಕಾರ್ಮಿಕನನ್ನು ಮಾತನಾಡಿಸಬೇಕಿತ್ತು ಎನ್ನುವುದು ಅಲ್ಲಿದ್ದವರ ಪ್ರತಿಕ್ರಿಯೆಯಾಗಿತ್ತು.
ಇದನ್ನೂ ಓದಿ: ಮಂಗಳೂರು: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ, ಚಿತ್ರಗಳ ಯಶಸ್ಸಿಗಾಗಿ ಪ್ರಾರ್ಥನೆ
ಆದರೆ, ರಚಿತಾ ಹಾಗೆ ಮಾಡಿಲ್ಲ ಎನ್ನುವುದೇ ಬೇಸರದ ಸಂಗತಿ. ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಕಾರು ಡಿಕ್ಕಿ ಹೊಡೆದ್ರು ನಟಿ ರಚಿತಾ ರಾಮ್ ತಿರುಗಿಯೂ ನೋಡಿಲ್ಲ. ಕೆಳಗೆ ಇಳಿದು ಸಿಬ್ಬಂದಿಯನ್ನು ವಿಚಾರಿಸದೆ ಮುಂದೆ ಹೋಗಿದ್ದಾರೆ. ನಟಿಯ ವರ್ತನೆಗೆ ಸಾರ್ವಜನಿಕರು ಕಿಡಿಕಾರಿದ್ದಾರೆ.