'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ತೆಲುಗು ಆವೃತ್ತಿ 'ಬಾಯ್ಸ್ ಹಾಸ್ಟೆಲ್' ಬಿಡುಗಡೆಗೆ ಸಿದ್ಧ

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾದ ತೆಲುಗು ಆವೃತ್ತಿ, 'ಬಾಯ್ಸ್ ಹಾಸ್ಟೆಲ್' ಅನ್ನು ಅನ್ನಪೂರ್ಣ ಸ್ಟುಡಿಯೋಸ್ ಮತ್ತು ಚಾಯ್ ಬಿಸ್ಕೆಟ್ ಫಿಲ್ಮ್ಸ್ ಜಂಟಿಯಾಗಿ ಪ್ರಸ್ತುತಪಡಿಸಲಿದ್ದು, ಆಗಸ್ಟ್ 26 ರಂದು ತೆರೆಗೆ ಬರಲಿದೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಸ್ಟಿಲ್
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಸ್ಟಿಲ್
Updated on

ನಿತಿನ್ ಕೃಷ್ಣಮೂರ್ತಿ ಅವರ ಚೊಚ್ಚಲ ನಿರ್ದೇಶನದ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ಜುಲೈ 21ರಂದು ಬಿಡುಗಡೆಯಾಯಿತು. ವಿಮರ್ಶಾತ್ಮಕ ಮತ್ತು ಕಮರ್ಷಿಯಲ್ ಆಗಿ ಮೆಚ್ಚುಗೆ ಗಳಿಸಿತು. ಚಿತ್ರವು 20 ಕೋಟಿ ರೂ. ಗೂ ಹೆಚ್ಚು ಗಳಿಸಿದೆ ಎಂದು ವರದಿಯಾಗಿದೆ. ಇದೀಗ ಚಿತ್ರತಂಡ ಈ ಸಿನಿಮಾವನ್ನು ತೆಲುಗು ಪ್ರೇಕ್ಷಕರ ಮುಂದೆ ತೆರೆದಿಡಲು ಸಜ್ಜಾಗಿದ್ದಾರೆ.

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾದ ತೆಲುಗು ಆವೃತ್ತಿ, 'ಬಾಯ್ಸ್ ಹಾಸ್ಟೆಲ್' ಅನ್ನು ಅನ್ನಪೂರ್ಣ ಸ್ಟುಡಿಯೋಸ್ ಮತ್ತು ಚಾಯ್ ಬಿಸ್ಕೆಟ್ ಫಿಲ್ಮ್ಸ್ ಜಂಟಿಯಾಗಿ ಪ್ರಸ್ತುತಪಡಿಸಲಿದ್ದು, ಆಗಸ್ಟ್ 26 ರಂದು ತೆರೆಗೆ ಬರಲಿದೆ.

ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟೂಡಿಯೋಸ್‌ ಪ್ರಸ್ತುತಪಡಿಸಿದ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಪ್ರಜ್ವಲ್ ಬಿಪಿ, ಮಂಜುನಾಥ್ ನಾಯ್ಕ, ರಾಕೇಶ್ ರಾಜಕುಮಾರ್, ಶ್ರೀವತ್ಸ ಮತ್ತು ತೇಜಸ್ ಜಯಣ್ಣ ಅರಸ್ ಸೇರಿದಂತೆ ಬಹುತೇಕ ಚೊಚ್ಚಲ ಕಲಾವಿದರನ್ನು ಒಳಗೊಂಡಿದೆ.

ಚಿತ್ರದಲ್ಲಿ ಚಿತ್ರವು ರಿಷಬ್ ಶೆಟ್ಟಿ, ಪವನ್ ಕುಮಾರ್ ಮತ್ತು ಶೈನ್ ಶೆಟ್ಟಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವು ಗಮನಾರ್ಹವಾಗಿ 500 ರಂಗಭೂಮಿ ಕಲಾವಿದರನ್ನು ಬೆಳ್ಳಿತೆರೆಗೆ ಪರಿಚಯಿಸಿದೆ. ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ಸಹ ನಿರ್ವಹಿಸಿರುವ ನಿರ್ದೇಶಕ ನಿತಿನ್ ಕೃಷ್ಣಮೂರ್ತಿ ಅವರು ವರುಣ್ ಗೌಡ, ಪ್ರಜ್ವಲ್ ಮತ್ತು ಛಾಯಾಗ್ರಾಹಕ ಅರವಿಂದ್ ಎಸ್. ಕಶ್ಯಪ್ ಅವರ ಸಹಯೋಗದೊಂದಿಗೆ ಗುಲ್‌ಮೊಹರ್ ಫಿಲ್ಮ್ಸ್ ಮತ್ತು ವರನ್ ಸ್ಟುಡಿಯೋಸ್ ಬ್ಯಾನರ್‌ಗಳ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com