ಮೇಘನಾ ರಾಜ್ ನಟನೆಯ 'ತತ್ಸಮ ತದ್ಭವ' ಟ್ರೇಲರ್ ಬಿಡುಗಡೆ ಮಾಡಿದ ಧ್ರುವ ಸರ್ಜಾ, ಡಾಲಿ ಧನಂಜಯ್!
ಹಲವು ವರ್ಷಗಳ ವಿರಾಮದ ನಂತರ ಚಿತ್ರರಂಗಕ್ಕೆ ಕಮ್‌ಬ್ಯಾಕ್ ಮಾಡಿರುವ ನಟಿ ಮೇಘನಾ ರಾಜ್ ಸರ್ಜಾ ಅವರ ನಟನೆಯ ‘ತತ್ಸಮ ತದ್ಭವ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ ಹಾಗೂ ಡಾಲಿ ಧನಂಜಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.
Published: 29th August 2023 11:08 AM | Last Updated: 29th August 2023 02:47 PM | A+A A-

ತತ್ಸಮ ತದ್ಭವ ಟ್ರೇಲರ್ ಬಿಡುಗಡೆ ಕಾರ್ಯಕ್ರಮ
ಹಲವು ವರ್ಷಗಳ ವಿರಾಮದ ನಂತರ ಚಿತ್ರರಂಗಕ್ಕೆ ಕಮ್‌ಬ್ಯಾಕ್ ಮಾಡಿರುವ ನಟಿ ಮೇಘನಾ ರಾಜ್ ಸರ್ಜಾ ಅವರ ನಟನೆಯ ‘ತತ್ಸಮ ತದ್ಭವ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ ಹಾಗೂ ಡಾಲಿ ಧನಂಜಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ಟ್ರೇಲರ್‌ನಲ್ಲಿ ಪೊಲೀಸ್ ತನಿಖೆ ಕುರಿತು ಹೇಳಲಾಗಿದ್ದು, ಕಾಣೆಯಾಗಿರುವ ಮೇಘನಾ ರಾಜ್ ಪಾತ್ರದ ಪತಿಯ ಹುಡುಕಾಟದ ಸುತ್ತ ಸುತ್ತುತ್ತದೆ. ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಟ್ರೇಲರ್ ಚಿತ್ರದ ಬಗ್ಗೆ ವ್ಯಾಪಕ ನಿರೀಕ್ಷೆಗಳನ್ನು ಹುಟ್ಟುಹಾಕಿದೆ.
ತತ್ಸಮ ತದ್ಭವವನ್ನು ವಿಶಾಲ್ ಆತ್ರೇಯ ಬರೆದು ನಿರ್ದೇಶಿಸಿದ್ದು, ಪನ್ನಗಾ ಭರಣ, ಸ್ಪೂರ್ತಿ ಅನಿಲ್ ಮತ್ತು ಚೇತನ್ ನಂಜುಂಡಯ್ಯ ನಿರ್ಮಿಸಿದ್ದಾರೆ. 'ಪ್ರಜ್ವಲ್ ದೇವರಾಜ್ ಜೊತೆಗೆ ಪನ್ನಗಾ ಭರಣ ಅವರು ನಾನು ನಟನೆಗೆ ಮರಳಲು ಮನವೊಲಿಸುವಲ್ಲಿ ಯಶಸ್ವಿಯಾದರು' ಎಂದು ಹೇಳುವ ಮೇಘನಾ, ತನ್ನನ್ನು ಬೆಂಬಲಿಸಿದ ಕುಟುಂಬಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
'ಈ ಚಿತ್ರದಲ್ಲಿ ನಾನು ಈ ಹಿಂದೆ ನಿರ್ವಹಿಸಿದ ಯಾವುದೇ ಪಾತ್ರಕ್ಕಿಂತ ಭಿನ್ನವಾದ ಪಾತ್ರವನ್ನು ನಿರ್ವಹಿಸಿದ್ದೇನೆ ಮತ್ತು ಅದು ನನಗೆ ತುಂಬಾ ಖುಷಿ ನೀಡಿದೆ' ಎಂದು ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿರುವ ಪ್ರಜ್ವಲ್ ದೇವರಾಜ್ ಹೇಳುತ್ತಾರೆ. ಅವರ ತಂದೆ ದೇವರಾಜ್ ಅವರು ನಟನೆಯೊಂದಿಗೆ, ಟ್ರೇಲರ್‌ಗೆ ಧ್ವನಿ ನೀಡಿದ್ದಾರೆ ಎಂದು ಅವರು ಬಹಿರಂಗಪಡಿಸಿದರು.
ಇದನ್ನೂ ಓದಿ: 'ತತ್ಸಮ- ತದ್ಭವ' ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ ನಟಿ ಮೇಘನಾ ರಾಜ್
ಕೆಆರ್‌ಜಿ ಸ್ಟುಡಿಯೋಸ್‌ನ ಬ್ಯಾನರ್‌ನಡಿಯಲ್ಲಿ ನಿರ್ಮಾಣವಾಗಿರುವ ತತ್ಸಮ ತದ್ಭವ ಸೆಪ್ಟೆಂಬರ್ 15ರಂದು ತೆರೆಗೆ ಬರಲಿದೆ. ವಾಸುಕಿ ವೈಭವ್ ಅವರ ಸಂಗೀತ ಸಂಯೋಜನೆ ಮತ್ತು ಶ್ರೀನಿವಾಸ್ ರಾಮಯ್ಯ ಅವರ ಛಾಯಾಗ್ರಹಣ ಚಿತ್ರಕ್ಕಿದೆ.