ಹೈದರಾಬಾದ್: ಅಪಾರ್ಟ್ ಮೆಂಟ್ ನಲ್ಲಿ ರೇವ್ ಪಾರ್ಟಿ; ಟಾಲಿವುಡ್ ನಿರ್ಮಾಪಕ ಸೇರಿ ಹಲವರ ಬಂಧನ
ಮಾದಕ ದ್ರವ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹೈದರಾಬಾದ್ ನಲ್ಲಿ ಭರ್ಜರಿ ಬೇಟೆ ಆಡಿದ್ದಾರೆ. ಸಿನಿಮಾ ನಿರ್ಮಾಪಕ ವೆಂಕಟ್ ಸೇರಿದಂತೆ ಐವರು ಸೆಲೆಬ್ರಿಟಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
Published: 31st August 2023 09:24 AM | Last Updated: 31st August 2023 09:26 AM | A+A A-

ಸಾಂದರ್ಭಿಕ ಚಿತ್ರ
ಹೈದರಾಬಾದ್: ಮಾದಕ ದ್ರವ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹೈದರಾಬಾದ್ ನಲ್ಲಿ ಭರ್ಜರಿ ಬೇಟೆ ಆಡಿದ್ದಾರೆ. ಸಿನಿಮಾ ನಿರ್ಮಾಪಕ ವೆಂಕಟ್ ಸೇರಿದಂತೆ ಐವರು ಸೆಲೆಬ್ರಿಟಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬುಧವಾರ ಮಧ್ಯರಾತ್ರಿ ಹೈದರಾಬಾದ್ನ ಮಾದಾಪುರದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ದಾಳಿ ನಡೆಸಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಮಾದಾಪುರದ ವಿಠ್ಠಲ್ರಾವ್ ನಗರದ ವೈಷ್ಣವಿ ಅಪಾರ್ಟ್‌ಮೆಂಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಎನ್ಸಿಬಿ ಅಧಿಕಾರಿಗಳು ದಾಳಿ ಮಾಡಿದರು.
ಇದನ್ನೂ ಓದಿ: ಬೆಂಗಳೂರು: ಒಂದು ತಿಂಗಳಿನಲ್ಲಿ 1,785 ಕೆಜಿ ಡ್ರಗ್ಸ್ ವಶಕ್ಕೆ, 487 ಬಂಧನ
ಈ ವೇಳೆ ಕೊಕೆನ್, ಎಲ್ಎಸ್ಡಿ ಸೇರಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಎಲ್ಲರನ್ನೂ ಮಾದಾಪುರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಈ ಪಾರ್ಟಿಯಲ್ಲಿ ಭಾಗವಹಿಸಿದವರ ಹೆಸರು ಇನ್ನಷ್ಟೇ ಹೊರ ಬೀಳಬೇಕಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ಈ ರೇವ್ ಪಾರ್ಟಿಯಲ್ಲಿ ಗಣ್ಯರ ಮಕ್ಕಳು ಭಾಗಿ ಆಗಿರುವ ಶಂಕೆ ಇದೆ. ಇವರಿಗೆ ಡ್ರಗ್ಸ್ ಸರಬರಾಜು ಮಾಡಿದವರು ಯಾರು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಮತ್ತೆ ತೆಲುಗು ಚಿತ್ರರಂಗದಲ್ಲಿ ಡ್ರಗ್ಸ್ ವಿಚಾರ ಮುನ್ನೆಲೆಗೆ ಬಂದಿರುವುದು ಅನೇಕರ ಬೇಸರಕ್ಕೆ ಕಾರಣ ಆಗಿದೆ.