'ಗನ್ಸ್ ಆ್ಯಂಡ್ ರೋಸಸ್' ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್​ ಎಂಟ್ರಿ

ಕನ್ನಡ ಚಿತ್ರರಂಗದಲ್ಲಿ ಸುಮಾರು ವರ್ಷಗಳಿಂದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ಅವರು ಬೆಳ್ಳಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಗನ್ಸ್ ಆ್ಯಂಡ್ ರೋಸಸ್ ಚಿತ್ರತಂಡ.
ಗನ್ಸ್ ಆ್ಯಂಡ್ ರೋಸಸ್ ಚಿತ್ರತಂಡ.

ಕನ್ನಡ ಚಿತ್ರರಂಗದಲ್ಲಿ ಸುಮಾರು ವರ್ಷಗಳಿಂದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ಅವರು ಬೆಳ್ಳಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

'ಗನ್ಸ್ ಅಂಡ್ ರೋಸಸ್' ಎಂಬ ಚಿತ್ರದ ಮೂಲಕ ನಾಯಕನಾಗಿ ಅರ್ಜುನ್ ಸ್ಯಾಂಡಲ್'ವುಡ್ ಪ್ರವೇಶಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರವನ್ನು ವರ್ಷಾಂತ್ಯದ ವೇಳೆಗೆ ಬಿಡುಗಡೆ ಮಾಡುವ ವಿಶ್ವಾಸವನ್ನು ನಿರ್ಮಾಪಕರು ವ್ಯಕ್ತಪಡಿಸಿದ್ದಾರೆ.

<strong>ಅರ್ಜುನ್</strong>
ಅರ್ಜುನ್

ಗನ್ಸ್ ಅಂಡ್ ರೋಸಸ್" ಚಿತ್ರದಲ್ಲಿ ಅಂಡರ್ ವಲ್ಡ್ ಹಾಗೂ ಪ್ರೇಮಕಥೆ ಎರಡು ಇರುತ್ತದೆ ಎಂದರು ಕಥೆ ಬರೆದಿರುವ ಶರತ್ ಅವರು ಹೇಳಿದ್ದಾರೆ.

ಯಶ್ವಿಕ ನಿಷ್ಕಲ ಈ ಚಿತ್ರದ ನಾಯಕಿಯಾಗಿದ್ದು, ಶಶಿಕುಮಾರ್ ಸಂಗೀತ ನೀಡುತ್ತಿದ್ದಾರೆ. ಜನಾರ್ದನ್ ಛಾಯಾಗ್ರಹಣ, ಸಂಜೀವ್ ರೆಡ್ಡಿ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದ್ದು, ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಶರತ್ ಬರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com