ಮಾರ್ಚ್ 1 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ 'ಕಾಂತಾರ' ಇಂಗ್ಲಿಷ್ ಆವೃತ್ತಿ ಬಿಡುಗಡೆ
ಮೂಲತಃ ಕನ್ನಡದಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾ ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ತುಳು ಭಾಷೆಗಳಿಗೆ ಡಬ್ ಆಗುವ ಮೂಲಕ ದೇಶದಾದ್ಯಂತ ಯಶಸ್ವಿಯಾದ ಪ್ಯಾನ್ ಇಂಡಿಯಾ ಚಲನಚಿತ್ರಗಳಲ್ಲಿ ಒಂದಾಯಿತು. ಇದೀಗ ಇಂಗ್ಲೀಷ್ ಆವೃತ್ತಿಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
Published: 06th February 2023 10:07 AM | Last Updated: 06th February 2023 02:46 PM | A+A A-

ಕಾಂತಾರ ಚಿತ್ರದ ಫೋಸ್ಟರ್
ಮೂಲತಃ ಕನ್ನಡದಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾ ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ತುಳು ಭಾಷೆಗಳಿಗೆ ಡಬ್ ಆಗುವ ಮೂಲಕ ದೇಶದಾದ್ಯಂತ ಯಶಸ್ವಿಯಾದ ಪ್ಯಾನ್ ಇಂಡಿಯಾ ಚಲನಚಿತ್ರಗಳಲ್ಲಿ ಒಂದಾಯಿತು. ಮಿಸ್ಟರಿ ಥ್ರಿಲ್ಲರ್ ಇತ್ತೀಚೆಗೆ ತನ್ನ 100 ದಿನಗಳ ಓಟವನ್ನು ಪೂರ್ಣಗೊಳಿಸಿತು ಮತ್ತು ಒಟಿಟಿಯಲ್ಲಿ ಬಿಡುಗಡೆಯಾದ ನಂತರವೂ ಬ್ಲಾಕ್‌ಬಸ್ಟರ್ ಸಿನಿಮಾ ಎನಿಸಿಕೊಂಡಿತು.
ಹೊಸ ವಿಚಾರವೆಂದರೆ, ಕಾಂತಾರ ಇದೀಗ ಇಂಗ್ಲಿಷ್ ಆವೃತ್ತಿಯಲ್ಲಿ ಬಿಡುಗಡೆಯಾಗುತ್ತಿದ್ದು, ಮಾರ್ಚ್ 1 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಕಾಂತಾರವನ್ನು ಕಣ್ತುಂಬಿಕೊಳ್ಳಬಹುದು.
ಬಹುತೇಕ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಚಿತ್ರೀಕರಣಗೊಂಡಿರುವ ಕಾಂತಾರ ಚಿತ್ರದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಕಿಶೋರ್, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ಇತರೆ ತಾರಾಗಣದಲ್ಲಿ ಪ್ರಸಾದ್ ತೂಮಿನಾಡ್, ಸ್ವರಾಜ್ ಶೆಟ್ಟಿ ಮತ್ತು ಮಾನಸಿ ಸುಧೀರ್ ಕೂಡ ಇದ್ದಾರೆ.
ಇದನ್ನೂ ಓದಿ: ನೀವೆಲ್ಲಾ ನೋಡಿದ್ದು ಕಾಂತಾರ-2, ಮುಂದೆ ಬರುವುದು ಕಾಂತಾರ ಪಾರ್ಟ್-1: ರಿಷಬ್ ಶೆಟ್ಟಿ
ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಎಸ್ ಕಶ್ಯಪ್ ಅವರ ಛಾಯಾಗ್ರಹಣದೊಂದಿಗೆ, ಕಾಂತಾರವನ್ನು ಹೊಂಬಾಳೆ ಪ್ರೊಡಕ್ಷನ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿದ್ದಾರೆ.