ಕೊನೆಗೂ ಊಹಾಪೋಹಗಳಿಗೆ ತೆರೆ: ಮಾಲ್ಡೀವ್ಸ್‌ನಲ್ಲಿ ಪ್ರಭಾಸ್-ಕೃತಿ ಸನೊನ್ ನಿಶ್ಚಿತಾರ್ಥ ಎಂದವರು ಯಾರು?
ಇದೀಗ ಇತ್ತೀಚಿನ ಸುದ್ದಿಯೆಂದರೆ, ಪ್ರಭಾಸ್ ಮತ್ತು ಕೃತಿ ಸನೊನ್ ಮುಂದಿನ ವಾರ ಮಾಲ್ಡೀವ್ಸ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬುದು. ಈ ಸುದ್ದಿಯನ್ನು ಚಿತ್ರ ವಿಮರ್ಶಕ ಉಮೈರ್ ಸಂಧು ಸ್ಪಷ್ಟಪಡಿಸಿದ್ದಾರೆ.
Published: 07th February 2023 02:56 PM | Last Updated: 08th February 2023 01:09 PM | A+A A-

ಪ್ರಭಾಸ್ - ಕೃತಿ ಸನೊನ್
ಆದಿಪುರುಷ ಚಿತ್ರಕ್ಕಾಗಿ ತೆಲುಗು ರೆಬೆಲ್ ಸ್ಟಾರ್ ಪ್ರಭಾಸ್ ಮತ್ತು ಕೃತಿ ಸನೊನ್ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಇದು ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಆದಿಪುರುಷ ಸಿನಿಮಾ ಸೆಟ್ಟೇರಿದಾಗಿನಿಂದಲೂ ಪ್ರಭಾಸ್, ಕೃತಿ ಸನೊನ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಇದೀಗ ಇತ್ತೀಚಿನ ಸುದ್ದಿಯೆಂದರೆ, ಪ್ರಭಾಸ್ ಮತ್ತು ಕೃತಿ ಸನೊನ್ ಮುಂದಿನ ವಾರ ಮಾಲ್ಡೀವ್ಸ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬುದು. ಈ ಸುದ್ದಿಯನ್ನು ಚಿತ್ರ ವಿಮರ್ಶಕ ಉಮೈರ್ ಸಂಧು ಸ್ಪಷ್ಟಪಡಿಸಿದ್ದಾರೆ.
ಈ ಫೇಕ್ ನ್ಯೂಸ್ ಹಂಚಿಕೊಂಡಿದ್ದಕ್ಕಾಗಿ ಕೆಲವು ಪ್ರಭಾಸ್ ಅಭಿಮಾನಿಗಳು ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇನ್ನೂ ಕೆಲವರು ಮಾಹಿತಿ ನೀಡಿದ್ದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ. ಪ್ರಭಾಸ್ ಮತ್ತು ಕೃತಿ ಸನೊನ್ ತಮ್ಮ ಡೇಟಿಂಗ್ ಬಗೆಗಿನ ವದಂತಿಗಳನ್ನು ತಳ್ಳಿಹಾಕಿದ್ದು, ನಮ್ಮ ನಡುವೆ ಏನೂ ಇಲ್ಲ ಎಂದು ಹೇಳಿದ್ದಾರೆ.
BREAKING NEWS: #KritiSanon & #Prabhas will get engaged next week in Maldives