'ಕಾಂತಾರ'ದ 'ವರಾಹರೂಪಂ' ಹಾಡು ವಿವಾದ: ರಿಷಬ್ ಶೆಟ್ಟಿ ಮತ್ತು ಚಿತ್ರತಂಡಕ್ಕೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್

'ಕಾಂತಾರ' ಕನ್ನಡ ಸಿನೆಮಾದಲ್ಲಿ 'ವರಾಹರೂಪಂ' ಹಾಡಿನ ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಚಿತ್ರದ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ವಿನಾಯ್ತಿ ನೀಡಿದೆ. ಈ ಮೂಲಕ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ನಿರ್ದೇಶಕ ಹಾಗೂ ನಾಯಕ ನಟ ರಿಷಬ್ ಶೆಟ್ಟಿ ನಿರಾಳರಾಗಿದ್ದಾರೆ. 
ಕಾಂತಾರ ಪೋಸ್ಟರ್
ಕಾಂತಾರ ಪೋಸ್ಟರ್

ನವದೆಹಲಿ: 'ಕಾಂತಾರ' ಕನ್ನಡ ಸಿನೆಮಾದಲ್ಲಿ 'ವರಾಹರೂಪಂ' ಹಾಡಿನ ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಚಿತ್ರದ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ವಿನಾಯ್ತಿ ನೀಡಿದೆ. ಈ ಮೂಲಕ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ನಿರ್ದೇಶಕ ಹಾಗೂ ನಾಯಕ ನಟ ರಿಷಬ್ ಶೆಟ್ಟಿ ನಿರಾಳರಾಗಿದ್ದಾರೆ. 

'ಕಾಂತಾರ' ಚಿತ್ರದ 'ವರಾಹರೂಪಂ' ಹಾಡನ್ನು ಪ್ರದರ್ಶಿಸಬಾರದು ಎಂದು ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಹಾಡಿನ ಮೇಲೆ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ತನಿಖೆಗೆ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿಯವರು ಫೆಬ್ರವರಿ 12 ಮತ್ತು 13ರಂದು ಹಾಜರಾಗುವ ವೇಳೆ ಅವರನ್ನು ಬಂಧಿಸಬಾರದೆಂದು ಸುಪ್ರೀಂ ಕೋರ್ಟ್ ಷರತ್ತು ವಿಧಿಸಿದೆ.

ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಕೇರಳ ಹೈಕೋರ್ಟ್ ಮೊನ್ನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದ್ದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎನ್ನುವ ಷರತ್ತೂ ಸೇರಿದಂತೆ ಹಲವು ಷರತ್ತುಗಳು ಹಾಕಿತ್ತು.

‘ಕಾಂತಾರ’ ಸಿನಿಮಾದ ಸೂಪರ್ ಹಿಟ್  ಹಾಡು ‘ವರಾಹ ರೂಪಂ’ ಹಾಡಿನ ಟ್ಯೂನ್ ಅನ್ನು ಕದಿಯಲಾಗಿದೆ ಎಂದು ಮಲಯಾಳಂನ ತೈಕ್ಕುಡಂ ಬ್ರಿಡ್ಜ್ ಆರೋಪಿಸಿ ದೂರು ನೀಡಿತ್ತು.  ಅದು ತಮ್ಮ ‘ನವರಸಂ’ ಹಾಡಿನದ್ದು ಎನ್ನುವುದನ್ನು ಸಾಕ್ಷ್ಯ ಸಮೇತ ಕೋಯಿಕ್ಕೋಡ್ ನ ಠಾಣೆಯಲ್ಲಿ ದೂರು ದಾಖಲಿಸಿತ್ತು.  ಈ ದೂರಿಗೆ ಸಂಬಂಧಿಸಿದಂತೆ ಮೊನ್ನೆ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com