ರಾಜಮೌಳಿ 'RRR'ಗೆ ಮತ್ತೊಂದು ಜಾಗತಿಕ ಗರಿ: 4 ವಿಭಾಗಗಳಲ್ಲಿ ಹಾಲಿವುಡ್ ಕ್ರಿಟಿಕ್ಸ್ ಅವಾರ್ಡ್

ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದ 'RRR' ಚಿತ್ರಕ್ಕೆ ಮತ್ತೊಂದು ಜಾಗತಿಕ ಮನ್ನಣೆ ದೊರೆತಿದ್ದು, 4 ವಿಭಾಗಗಳಲ್ಲಿ ಹಾಲಿವುಡ್ ಕ್ರಿಟಿಕ್ಸ್ ಪ್ರಶಸ್ತಿಗೆ ಚಿತ್ರ ಭಾಜನವಾಗಿದೆ.
RRR ಚಿತ್ರ ತಂಡ
RRR ಚಿತ್ರ ತಂಡ

ನವದೆಹಲಿ: ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದ 'RRR' ಚಿತ್ರಕ್ಕೆ ಮತ್ತೊಂದು ಜಾಗತಿಕ ಮನ್ನಣೆ ದೊರೆತಿದ್ದು, 4 ವಿಭಾಗಗಳಲ್ಲಿ ಹಾಲಿವುಡ್ ಕ್ರಿಟಿಕ್ಸ್ ಪ್ರಶಸ್ತಿಗೆ ಚಿತ್ರ ಭಾಜನವಾಗಿದೆ.

ಹೌದು.. ಈ ಹಿಂದೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಖುಷಿಯಲ್ಲಿರುವ ರಾಜಮೌಳಿ ಅವರ 'ಆರ್‌ಆರ್‌ಆರ್' ಸಿನಿಮಾಕ್ಕೀಗ ಮತ್ತೊಂದು ಪ್ರಶಸ್ತಿ ಗರಿ ಲಭಿಸಿದ್ದು, ಆರ್‌ಆರ್‌ಆರ್ ಚಿತ್ರ ಹಾಲಿವುಡ್ ಕ್ರಿಟಿಕ್ಸ್ ಅವಾರ್ಡ್ಸ್‌ಗೆ ಭಾಜನವಾಗಿದೆ. 

ಹಾಲಿವುಡ್ ಕ್ರಿಟಿಕ್ಸ್ ಅವಾರ್ಡ್ಸ್‌ನ ವಿವಿಧ ವಿಭಾಗಗಳಲ್ಲಿ ಆರ್‌ಆರ್‌ಆರ್‌ ಚಿತ್ರ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದು, ಶುಕ್ರವಾರ ಲಾಸ್‌ ಏಂಜಲೀಸ್‌ನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಚಿತ್ರ ನಿರ್ದೇಶಕ ಎಸ್‌ಎಸ್‌ ರಾಜಮೌಳಿ ಹಾಗೂ ನಟ ರಾಮಚರಣ್ ಅವರು ಪ್ರಶಸ್ತಿ ಸ್ವೀಕರಿಸಿದರು.

ಅತ್ಯುತ್ತಮ ಆ್ಯಕ್ಷನ್ ಸಿನಿಮಾ, ಅತ್ಯುತ್ತಮ ಇಂಟರ್‌ನ್ಯಾಷನಲ್ ಫೀಚರ್ ಸಿನಿಮಾ, ಅತ್ಯುತ್ತಮ ಒರಿಜಿನಲ್ ಸಾಂಗ್ ಹಾಗೂ ಬೆಸ್ಟ್ ಸ್ಟಂಟ್ ವಿಭಾಗದಲ್ಲಿ ಹಾಲಿವುಡ್ ಕ್ರಿಟಿಕ್ಸ್ ಅವಾರ್ಡ್ಸ್‌ ‍ಲಭಿಸಿದೆ. ಇನ್ನು 'ಆಲ್ ಕ್ವೈಟ್ ಆನ್ ದಿ ವೆಸ್ಟರ್ನ್ ಫ್ರಂಟ್', 'ಅರ್ಜೆಂಟೀನಾ 1985', 'ಬಾರ್ಡೋ', 'ಫಾಲ್ಸ್ ಕ್ರಾನಿಕಲ್ ಆಫ್ ಎ ಹ್ಯಾಂಡ್‌ಫುಲ್ ಆಫ್ ಟ್ರೂತ್ಸ್', 'ಕ್ಲೋಸ್' ಮತ್ತು 'ಡಿಸಿಷನ್ ಟು ಲೀವ್' ಮುಂತಾದ ಚಿತ್ರಗಳು ಸ್ಪರ್ಧೆಯಲ್ಲಿದ್ದವು.

ಈ ಬಗ್ಗೆ ಮಾತನಾಡಿರುವ ಚಿತ್ರ ನಿರ್ದೇಶಕ ಎಸ್‌ಎಸ್‌ ರಾಜಮೌಳಿ ಅವರು, ನನಗೆ ಹಾಲಿವುಡ್ ಕ್ರಿಟಿಕ್ಸ್ ಅವಾರ್ಡ್ಸ್‌ ಲಭಿಸಿರುವ ಸಂಗತಿ ಇನ್ನೂ ನಂಬಲು ಆಗುತ್ತಿಲ್ಲ. ರೆಕ್ಕೆ ಬಂದು ಹಾರಿದಷ್ಟು ಸಂತೋಷವಾಗುತ್ತಿದೆ. ಈ ಸಾಧನೆಯನ್ನು ನನಗೆ ಪದಗಳಲ್ಲಿ ಹೇಳಲು ಆಗುತ್ತಿಲ್ಲ ಎಂದು ಹೇಳಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com