ಸಿಂಪಲ್ ಸುನಿ-ವಿನಯ್ ರಾಜ್ ಕುಮಾರ್ ಚಿತ್ರಕ್ಕೆ ಆಯ್ಕೆಯಾದ ಕಿರುತೆರೆ ನಟಿ ಮಲ್ಲಿಕಾ ಸಿಂಗ್
ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಮುಗಿದಿದೆ. ಕಮಲ್ ಹಾಸನ್ ಅವರ ವಿಕ್ರಮ್ ಸಿನಿಮಾದ ಭಾಗವಾಗಿದ್ದ ನಟಿ ಸ್ವಾದಿಷ್ಟ ಕೃಷ್ಣನ್ ಅವರು ಈಗಾಗಲೇ ಈ ಯೋಜನೆಯ ಭಾಗವಾಗಿದ್ದಾರೆ.
Published: 27th February 2023 11:28 AM | Last Updated: 27th February 2023 11:28 AM | A+A A-

ಮಲ್ಲಿಕಾ ಸಿಂಗ್ - ವಿನಯ್ ರಾಜ್‌ಕುಮಾರ್
ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಮುಗಿದಿದೆ. ಕಮಲ್ ಹಾಸನ್ ಅವರ ವಿಕ್ರಮ್ ಸಿನಿಮಾದ ಭಾಗವಾಗಿದ್ದ ನಟಿ ಸ್ವಾದಿಷ್ಟ ಕೃಷ್ಣನ್ ಅವರು ಈಗಾಗಲೇ ಈ ಯೋಜನೆಯ ಭಾಗವಾಗಿದ್ದಾರೆ. ಇತ್ತೀಚಿನ ವಿಚಾರವೆಂದರೆ ನಟಿ ಮಲ್ಲಿಕಾ ಸಿಂಗ್ ಅವರನ್ನು ಚಿತ್ರಕ್ಕೆ ಕರೆತರಲು ನಿರ್ಧರಿಸಲಾಗಿದೆ.
ಸ್ವಾದಿಷ್ಟ ಅವರು ಜರ್ನಲಿಸ್ಟ್ ಆಗಿ ಕಾಣಿಸಿಕೊಂಡರೆ, ಮಲ್ಲಿಕಾ ಕಾಶ್ಮೀರಿ ಹುಡುಗಿಯ ಪಾತ್ರದಲ್ಲಿ ನಟಿಸುವ ಸಾಧ್ಯತೆ ಇದೆ. ಕನ್ನಡದಲ್ಲಿ ಡಬ್ಬಿಂಗ್ ಆವೃತ್ತಿಯನ್ನು ಹೊಂದಿದ್ದ ಜನಪ್ರಿಯ ಹಿಂದಿ ಧಾರಾವಾಹಿ 'ರಾಧಾಕೃಷ್ಣ' ಖ್ಯಾತಿಯ ಮಲ್ಲಿಕಾ ಗಲ್ಲಿ ಬಾಯ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಕನ್ನಡದಲ್ಲಿ ಇದು ಅವರ ಮೊದಲ ಸಿನಿಮಾ ಆಗಲಿದೆ.
ಚಿತ್ರಕ್ಕೆ ಮೈಸೂರು ರಮೇಶ್ ಅವರು ಬಂಡವಾಳ ಹೂಡಿದ್ದು, ಮಲ್ಲಿಕಾ ಸಿಂಗ್ ಅವರ ಪಾತ್ರದ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳುವ ನಿರೀಕ್ಷೆಯಿದೆ.
ಇದನ್ನೂ ಓದಿ: ಸಿಂಪಲ್ ಸುನಿ ನಿರ್ದೇಶನದ ಸಿನಿಮಾದಲ್ಲಿ ವಿನಯ್ ರಾಜ್ ಗೆ ಸ್ವಾತಿಷ್ಠ ಕೃಷ್ಣನ್ ನಾಯಕಿ!
ಈಮಧ್ಯೆ, ವಿನಯ್ ಅವರು ಕೀರ್ತಿ ನಿರ್ದೇಶನದ 'ಅಂದೊಂದಿತ್ತು ಕಾಲ' ಮತ್ತು ಶ್ರೀಲೇಶ್ ನಾಯರ್ ಅವರ 'ಪೆಪೆ' ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ, ಅದು ಬಿಡುಗಡೆಗೆ ಸಿದ್ಧವಾಗಿದೆ. ಅಲ್ಲದೆ, 'ಗ್ರಾಮಾಯಣ' ಸಿನಿಮಾದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ಸುನಿ ಅವರು ಹೊಸಬರಾದ ದುಷ್ಯಂತ್ ಮತ್ತು ಆಶಿಕಾ ರಂಗನಾಥ್ ಅಭಿನಯದ ಗಥವೈಭವ ಚಿತ್ರವನ್ನು ಸಹ ನಿರ್ದೇಶಿಸುತ್ತಿದ್ದಾರೆ.